ಚೇತರಿಕೆ ಕಂಡ ಷೇರುಪೇಟೆ
ಸತತವಾಗಿ ಇಳಿಕೆಯತ್ತ ಸಾಗುತ್ತಿದ್ದ ಭಾರತೀಯ ಷೇರುಮಾರುಕಟ್ಟೆ ಬುಧವಾರ ಚೇತರಿಕೆ ಕಂಡಿದ್ದು, ದಿನದಂತ್ಯಕ್ಕೆ ಸೆನ್ಸೆಕ್ಸ್ 450 ಅಂಕಗಳ ಏರಿಕೆ ಕಂಡಿದೆ...

ಮುಂಬೈ: ಸತತವಾಗಿ ಇಳಿಕೆಯತ್ತ ಸಾಗುತ್ತಿದ್ದ ಭಾರತೀಯ ಷೇರುಮಾರುಕಟ್ಟೆ ಬುಧವಾರ ಚೇತರಿಕೆ ಕಂಡಿದ್ದು, ದಿನದಂತ್ಯಕ್ಕೆ ಸೆನ್ಸೆಕ್ಸ್ 450 ಅಂಕಗಳ ಏರಿಕೆ ಕಂಡಿದೆ.
ಕಳೆದವಾರವಷ್ಟೇ ಭಾರಿ ಇಳಿಕೆ ಕಂಡಿದ್ದ ಸೆನ್ಸೆಕ್ಸ್ ಮತ್ತೆ ಚೇತರಿಕೆಯತ್ತ ಮುಖಮಾಡಿದ್ದು, ಬುಧವಾರದ ದಿನದಂತ್ಯಕ್ಕೆ ಸೆನ್ಸೆಕ್ಸ್ ಶೇ.1.36ರಷ್ಟು ಏರಿಕೆ ಕಂಡಿದೆ. ಸೆನ್ಸೆಕ್ಸ್ ಒಟ್ಟು 359.25 ಅಂಕಗಳ ಏರಿಕೆ ಕಂಡಿದ್ದು, ಅಂಕಗಳ ಗಳಿಕೆಯನ್ನು 26840 ಏರಿಕೆ ಮಾಡಿಕೊಂಡಿದೆ. ನಿಫ್ಟಿಯಲ್ಲಿ ಕೂಡ ಅಲ್ಪ ಏರಿಕೆ ಕಂಡುಬಂದಿದ್ದು, ನಿಫ್ಟಿ 102.5 ಅಂಕಗಳ ಏರಿಕೆಯೊಂದಿಗೆ 8,100 ಅಂಕಗಳಿಗೆ ಏರಿಕೆಯಾಗಿದೆ.
ಇನ್ನು ಖ್ಯಾತ ಷೇರು ಸಂಸ್ಥೆಗಳಾದ ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೋಸಿಸ್, ಐಸಿಐಸಿಐ ಬ್ಯಾಂಕ್, ಎಲ್ ಅಂಡ್ ಟಿ ಮತ್ತು ಹೆಡ್ ಎಫ್ ಸಿ ಬ್ಯಾಂಕುಗಳ ಷೇರು ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ.
ಇದಲ್ಲದೆ ಗ್ರಾಹಕ ಬಳಕೆ ವಸ್ತುಗಳು, ಬ್ಯಾಂಕಿಂಗ್ ಕ್ಷೇತ್ರ, ಇಂಧನ ಕ್ಷೇತ್ರ ಮತ್ತು ರಿಯಾಲ್ಟಿ ಕ್ಷೇತ್ರಗಳ ಷೇರುಗಳ ಮೌಲ್ಯ ಏರಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚೀನಾದ ಎ ಷೇರುಗಳ ಲಾಭ ಭಾರತೀಯ ಮಾರುಕಟ್ಟೆ ಪಡೆದಿದ್ದು, ಇದರ ಪರಿಣಾಮವಾಗಿಯೇ ಭಾರತೀಯ ಷೇರುಮಾರುಕಟ್ಟೆ ಚೇತರಿಕೆ ಕಂಡಿದೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಇದಲ್ಲದೆ ರೈತರಿಗೆ ಬಾಕಿ ಉಳಿಸಿಕೊಂಡಿರುವ ಹಣ ಪಾವತಿಸಲು ಕೇಂದ್ರ ಸರ್ಕಾರ ಸಕ್ಕರೆ ಕಾರ್ಖಾನೆಗಳಿಗೆ 6 ಸಾವಿರ ಕೋಟಿ ರೂ. ಬಡ್ಡಿರಹಿತ ಸಾಲ ನೀಡಲು ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ತೀರ್ಮಾನಿಸಿತ್ತು. ಇದು ಕೂಡ ಷೇರುಮಾರುಕಟ್ಟೆ ಮೇಲೆ ಪರಿಣಾಮ ಬೀರಿದ್ದು, ಷೇರು ಪೇಟೆಯಲ್ಲಿ ಸಕ್ಕರೆ ಕಾರ್ಖಾನೆಗಳ ಷೇರುಗಳ ಮೌಲ್ಯ ಹೆಚ್ಚಾಯಿತು. ಇದರ ಜತೆಗೆ ಬ್ಲ್ಯೂಚಿಪ್ ಷೇರುಗಳ ಬೆಲೆ ಸುಧಾರಿಸಿದ್ದು, ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳ ಉತ್ತಮ ನಿರ್ವಹಣೆಗೆ ಕಾರಣವಾಯಿತು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


