ಚಿಲ್ಲರೆ ಹಣದುಬ್ಬರ ಶೇ.5.01ಕ್ಕೇರಿಕೆ
ಹಣ್ಣು, ತರಕಾರಿಗಳ ದರ ಕಡಿಮೆಯಾದರೂ, ದ್ವಿದಳ ಧಾನ್ಯಗಳ ಬೆಲೆ ಹೆಚ್ಚಿದ ಪರಿಣಾಮ ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ದರ ಏರಿಕೆಯಾಗಿದೆ. ಏಪ್ರಿಲ್ ನಲ್ಲಿ...

ನವದೆಹಲಿ: ಹಣ್ಣು, ತರಕಾರಿಗಳ ದರ ಕಡಿಮೆಯಾದರೂ, ದ್ವಿದಳ ಧಾನ್ಯಗಳ ಬೆಲೆ ಹೆಚ್ಚಿದ ಪರಿಣಾಮ ಮೇ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ದರ ಏರಿಕೆಯಾಗಿದೆ. ಏಪ್ರಿಲ್ ನಲ್ಲಿ ಶೇ.4.87ರಷ್ಟಿದ್ದ ಗ್ರಾಹಕ ದರ ಸೂಚ್ಯಂಕ ಆಧರಿತ ಹಣದುಬ್ಬರ ಮೇ ತಿಂಗಳಲ್ಲಿ ಶೇ.5.01 ಆಗಿತ್ತು ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ತಿಳಿಸಿದೆ. 2014ರ ಮೇ ತಿಂಗಳಲ್ಲಿ ಹಣದುಬ್ಬರ ಶೇ.8.33 ಆಗಿತ್ತು. ಇದೇ ವೇಳೆ, ಏಪ್ರಿಲ್‍ನಲ್ಲಿ ಕೈಗಾರಿಕಾ ಉತ್ಪಾದನೆ ಶೇ.4.1ರಷ್ಟಾಗಿದ್ದು, ಇದು 2 ತಿಂಗಳಲ್ಲೇ ಆದ ಅತ್ಯಧಿಕ ಏರಿಕೆ ಎಂದು ಸರ್ಕಾರ ತಿಳಿಸಿದೆ. ಉತ್ಪಾದನಾ ವಲಯದ ಪ್ರಗತಿ ಹೆಚ್ಚಾಗಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


