ವಾಣಿಜ್ಯ

ಪೆಟ್ರೋಲ್ ಪ್ರತಿ ಲೀ.ಗೆ 64 ಪೈಸೆ ಏರಿಕೆ, ಡೀಸೆಲ್ 1.35 ರು ಇಳಿಕೆ

ಕಳೆದ ತಿಂಗಳಷ್ಟೇ ಪೆಟ್ರೋಲ್ ದರದಲ್ಲಿ ಭಾರೀ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ಕೊಟ್ಟಿದ್ದ ಕೇಂದ್ರ ಸರ್ಕಾರ ಮತ್ತೊಮ್ಮೆ ಪೆಟ್ರೋಲ್ ದರ ಏರಿಕೆ ಮಾಡಿದೆ.

ಪೆಟ್ರೋಲ್ ಪ್ರತಿ ಲೀ.ಗೆ 64 ಪೈಸೆ ಏರಿಕೆ, ಡೀಸೆಲ್ 1.35 ರು ಇಳಿಕೆ
ಪೆಟ್ರೋಲ್, ಡೀಸೆಲ್
Published On :

ನವದೆಹಲಿ: ಕಳೆದ ತಿಂಗಳಷ್ಟೇ ಪೆಟ್ರೋಲ್ ದರದಲ್ಲಿ ಭಾರೀ ಏರಿಕೆ ಮಾಡಿ ಗ್ರಾಹಕರಿಗೆ ಶಾಕ್ ಕೊಟ್ಟಿದ್ದ ಕೇಂದ್ರ ಸರ್ಕಾರ ಮತ್ತೊಮ್ಮೆ ಪೆಟ್ರೋಲ್ ದರ ಏರಿಕೆ ಮಾಡಿದೆ.

ಆದರೆ ಖುಷಿಯ ಸಂಗತಿ ಎನ್ನೆಂದರೆ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು. ಡೀಸೆಲ್ ಬೆಲೆ ಇಳಿಕೆಯಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ಗೆ 64 ಪೈಸೆ ಏರಿಕೆಯಾಗಿದ್ದು, ಡೀಸೆಲ್ ಪ್ರತಿ ಲೀಟರ್ ಗೆ 1.35 ರು. ಏರಿಕೆ ಮಾಡಿ ಸಾರ್ವಜನಿಕ ವಲಯದ ತೈಲ ಕಂಪನಿಗಳು ಘೋಷಿಸಿವೆ. ಈ ಪರಿಷ್ಕೃತ ದರ 15 ಅಥವಾ 16ರ ಮಧ್ಯ ರಾತ್ರಿಯಿಂದ ಜಾರಿಗೆ ಬರಲಿದೆ.

ಕಳೆದ ಮೇ 1 ರಂದು ಹಾಗೂ 15 ರಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಗಣನೀಯ ಏರಿಕೆ ಮಾಡಲಾಗಿತ್ತು. ಮೇ 1ರಂದು ಪೆಟ್ರೋಲ್ ದರ ಲೀಟರ್ ಗೆ 3.96 ರು. ಹಾಗೂ ಡೀಸೆಲ್ ಲೀಟರ್ ಗೆ 2.37 ರು. ಏರಿಕೆ ಮಾಡಲಾಗಿತ್ತು. ಬಳಿಕ ಮೇ 15 ರಂದು 3.13 ರು ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 2.71 ರು. ಏರಿಕೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.