ಕೆನರಾ ಬ್ಯಾಂಕ್ ಲಾಭ ರು.529 ಕೋಟಿ
ಸೆಪ್ಟೆಂಬರ್‍ಗೆ ಅಂತ್ಯಗೊಂಡ ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಕೆನರಾಬ್ಯಾಂಕ್ ರು.529 ಕೋಟಿ ನಿವ್ವಳ ಲಾಭ ಗಳಿಸಿದೆ...

ಬೆಂಗಳೂರು: ಸೆಪ್ಟೆಂಬರ್‍ಗೆ ಅಂತ್ಯಗೊಂಡ ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಸರ್ಕಾರಿ ಸ್ವಾಮ್ಯದ ಕೆನರಾಬ್ಯಾಂಕ್ ರು.529 ಕೋಟಿ ನಿವ್ವಳ ಲಾಭ ಗಳಿಸಿದೆ.
ನಗರದಲ್ಲಿನ ಬ್ಯಾಂಕ್‍ನ ಪ್ರಧಾನ ಕಾಚೇರಿಯಲ್ಲಿ ಬುಧವಾರ ಹಣಕಾಸು ವರದಿ ಬಿಡುಗಡೆ ಮಾಡಿದ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶರ್ಮಾ, ಈ ಅವಧಿಯಲ್ಲಿ ರು.529 ಕೋಟಿ ನಿವ್ವಳ ಲಾಭವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.10.44 ರಷ್ಟು ಏರಿಕೆ ಕಂಡಿದೆ ಎಂದು ತಿಳಿಸಿದರು.
ಬ್ಯಾಂಕ್‍ನ ಒಟ್ಟಾರೆ ಆದಾಯ ರು.1,944 ಕೋಟಿ ಇದ್ದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ.19.54 ರಷ್ಟು ಪ್ರಗತಿ ಕಂಡಿದೆ. ಪ್ರಧಾನಮಂತ್ರಿ ಜನಧನ ಯೋಜನೆಯಲ್ಲಿ 70.59 ಲಕ್ಷ ಖಾತೆಗಳನ್ನು ತೆರೆಯಲಾಗಿದೆ. ಉಳಿತಾಯ ಹಾಗೂ ಚಾಲ್ತಿ ಖಾತೆಯಲ್ಲಿ ರು.1,011 ಕೋಟಿ ಜಮಾ ಆಗಿದೆ. ಈ ಯೋಜನೆಯಡಿ 94,267 ಖಾತೆದಾರರಿಗೆ ಓವರ್ ಡ್ರಾಫ್ಟ್ ಸೌಲಭ್ಯ ನೀಡಲಾಗಿದ್ದು, ಇದುವರೆಗೆ ರು.17.11 ಕೋಟಿ ವಿತರಿಸಲಾಗಿದೆ.
ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಲ್ಲಿ 51.86 ಲಕ್ಷ ಹಾಗೂ ಸುರಕ್ಷಾ ಬಿಮಾ ಯೋಜನೆಯಲ್ಲಿ 43.98 ಲಕ್ಷ ನೋಂದಣಿ ಮಾಡಲಾಗಿದೆ ಎಂದು ತಿಳಿಸಿದರು. ಕಾರ್ಯನಿರ್ವಾಹಕ ನಿರ್ದೇಶಕರಾದ ಹರಿದೀಶ್ ಕುಮಾರ್, ಪಿ.ಎಸ್.ರಾವತ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


