ದೇಶದಲ್ಲಿ ಚಿನ್ನಕ್ಕೆ ಹೆಚ್ಚಿದ ಬೇಡಿಕೆ
ಪ್ರಸಕ್ತ ಹಣಕಾಸು ಸಾಲಿನ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದೇಶದಲ್ಲಿ ಚಿನ್ನದ ಬೇಡಿಕೆ ಶೇ.13ರಷ್ಟು ಏರಿಕೆ ಕಂಡಿದೆ...

Published On :
ಮುಂಬೈ: ಪ್ರಸಕ್ತ ಹಣಕಾಸು ಸಾಲಿನ ಜುಲೈ-ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದೇಶದಲ್ಲಿ ಚಿನ್ನದ ಬೇಡಿಕೆ ಶೇ.13ರಷ್ಟು ಏರಿಕೆ ಕಂಡಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ 238.20 ಟನ್ ಚಿನ್ನ ಆಮದು ಮಾಡಿಕೊಂಡಿದ್ದರೆ ಈ ವರ್ಷ 268.10 ಟನ್‍ಗೆ ಏರಿಕೆ ಕಂಡಿದೆ ಎಂದು ವಿಶ್ವ ಚಿನ್ನದ ಪರಿಷತ್ತು (ಡಬ್ಲ್ಯುಜಿಸಿ) ವರದಿ ಹೇಳಿದೆ. ಹಣಕಾಸು ಮೌಲ್ಯದ ಲೆಕ್ಕಾಚಾರದಲ್ಲಿ ಬೇಡಿಕೆ ಶೇ.5.8ರಷ್ಟು ಏರಿಕೆ ಕಂಡಿದ್ದು, ರು.62,939 ಕೋಟಿಗೆ ತಲುಪಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಈ ಮೌಲ್ಯ ರು.59,480 ಕೋಟಿ ಇತ್ತು ಎಂದು ಡಬ್ಲ್ಯುಜಿಸಿ ವಿವರಿಸಿದೆ. ಹಬ್ಬ ಮತ್ತು ಮದುವೆ ಸೀಸನ್ ಗೆ ಹೆಚ್ಚಿನ ಖರೀದಿಯಾಗಿದ್ದರಿಂದ ಬೇಡಿಕೆ ಹೆಚ್ಚಿದೆ ಎಂದು ಡಬ್ಲ್ಯುಜಿಸಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


