ಮಲ್ಯ ನಿವಾಸ, ಕಿಂಗ್‌ಫಿಶರ್ ಏರ್‌ಲೈನ್ಸ್ ಕಚೇರಿಗಳ ಮೇಲೆ ಸಿಬಿಐ ದಾಳಿ
ರಾಜ್ಯಸಭಾ ಸದಸ್ಯ ಹಾಗೂ ಉದ್ಯಮಿ ವಿಜಯ ಮಲ್ಯ ಅವರ ಲ್ಯಾವೆಲ್ಲೆ ರಸ್ತೆಯಲ್ಲಿರುವ ನಿವಾಸ ಹಾಗೂ ಅವರ ಮಾಲೀಕತ್ವದ ಕಿಂಗ್‌ಫಿಶರ್ ಏರ್‌ಲೈನ್ಸ್ ಕಚೇರಿಗಳ...

ಬೆಂಗಳೂರು: ರಾಜ್ಯಸಭಾ ಸದಸ್ಯ ಹಾಗೂ ಉದ್ಯಮಿ ವಿಜಯ ಮಲ್ಯ ಅವರ ಲ್ಯಾವೆಲ್ಲೆ ರಸ್ತೆಯಲ್ಲಿರುವ ನಿವಾಸ ಹಾಗೂ ಅವರ ಮಾಲೀಕತ್ವದ ಕಿಂಗ್‌ಫಿಶರ್ ಏರ್‌ಲೈನ್ಸ್ ಕಚೇರಿಗಳ ಮೇಲೆ ಶನಿವಾರ ಸಿಬಿಐ ದಾಳಿ ನಡೆಸಿದೆ.
ಐಡಿಬಿಐ ಬ್ಯಾಂಕ್‌ನಿಂದ 950 ಕೋಟಿ ರುಪಾಯಿ ಸಾಲ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಮಲ್ಯ ನಿವಾಸ ಹಾಗೂ ಕಿಂಗ್‌ಫಿಶರ್ ಏರ್‌ಲೈನ್ಸ್‌ನ ದೆಹಲಿ, ಮುಂಬೈ, ಗೋವಾ ಹಾಗೂ ಬೆಂಗಳೂರು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಕಿಂಗ್‌ಫಿಶರ್ ಏರ್‌ಲೈನ್ಸ್ ಈಗಾಗಲೇ ತನ್ನ ಸೇವೆಯನ್ನು ಸ್ಥಗಿತಗೊಳಿಸಿದ್ದು, ಬ್ಯಾಂಕಿಂಗ್ ನಿಯಮಗಳನ್ನು ಉಲ್ಲಂಘನೆ ಹಾಗೂ ಸಾಲ ಪಾವತಿಸುವಾಗ ವಂಚನೆ ಮಾಡಿದ ಆರೋಪ ಎದುರಿಸುತ್ತಿದೆ.
ನಷ್ಟಕ್ಕೆ ಸಿಲುಕಿದ ವಿಜಯಮಲ್ಯ ಒಡೆತನದ ಕಿಂಗ್‌ಫಿಶರ್ ಏರ್‌ಲೈನ್ಸ್‌ನ ವಿಮಾನಗಳು 2012ರ ಅಕ್ಟೋಬರ್‌ನಲ್ಲಿ ಹಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಿದ್ದವು. ಮತ್ತೆ ತನ್ನ ಕಾರ್ಯಚಟುವಟಿಕೆಗಳನ್ನು ಆರಂಭಿಸುವ ಕುರಿತು ಕೈಗೊಳ್ಳಲಿರುವ ಯೋಜನೆಗಳ ಬಗ್ಗೆ ವಿವರಿಸುವಲ್ಲಿ ವಿಫಲವಾದ ಕಾರಣ 2012ರ ಡಿ.31ರಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶಾನಲಯ ಕಿಂಗ್‌ಫಿಶರ್ ಏರ್‌ಲೈನ್ಸ್‌ನ ಹಾರಾಟ ಪರವಾನಗಿಯನ್ನು ರದ್ದುಗೊಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


