ಕಪ್ಪು ಹಣ ವರ್ಗಾಯಿಸಿದ ಬ್ಯಾಂಕ್ ಆಫ್ ಬರೋಡ: ಸಿಬಿಐನಿಂದ ತಪಾಸಣೆ
ಕಪ್ಪು ಹಣವನ್ನು ವಿದೇಶಗಳಿಗೆ ವರ್ಗಾಯಿಸಿದ್ದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಶನಿವಾರ ಇಲ್ಲಿನ ಬ್ಯಾಂಕ್ ಆಫ್ ಬರೋಡಾ...

Published On :
ನವದೆಹಲಿ: ಕಪ್ಪು ಹಣವನ್ನು ವಿದೇಶಗಳಿಗೆ ವರ್ಗಾಯಿಸಿದ್ದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಶನಿವಾರ ಇಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.
ಬ್ಯಾಂಕ್ ಆಫ್ ಬರೋಡಾ ದೆಹಲಿಯಲ್ಲಿನ ಶಾಖೆಗಳ ಮೂಲಕ ರು.6,100 ಕೋಟಿ ಕಪ್ಪು ಹಣವನ್ನು ಹಾಂಕಾಂಗ್‍ಗೆ ವರ್ಗಾಯಿಸಿ ದೆ ಎಂದು ಆರೋಪಿಸಲಾಗಿದೆ. ಬ್ಯಾಂಕ್ ಅಧಿಕಾರಿಗಳು ಕಂಪನಿಗಳ ಮಾಲೀಕರೊಂದಿಗೆ ಕೈಜೋಡಿಸಿ ಇಂತರ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಅಕ್ರಮ ವಹಿವಾಟು ನಡೆದಿರುವು ದು ಬ್ಯಾಂಕ್‍ನ ಆಡಿಟ್ ವರದಿಗಳಲ್ಲಿ ಕಂಡು ಬಂದಿದೆ ಎಂದು ಸಿಬಿಐ ಮೂಲಗಳು ಹೇಳಿವೆ. ಇಲ್ಲಿನ ಅಶೋಕ್ ವಿಹಾರ್ ಶಾಖೆಯಲ್ಲಿ ತೆರೆದಿರುವ 60 ಕಂಪನಿ ಗಳ ಖಾತೆಗಳಿಂದ ಈ ವಹಿವಾಟು ನಡೆಸಿದ್ದು, ಈ ಕುರಿತು ತಪಾಸಣೆ ನಡೆಯುತ್ತಿದೆ. ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿ ಬ್ಯಾಂಕ್ ದಾಖಲೆ ಪರಿಶೀಲಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


