ಜಾಗತಿಕ ಆರ್ಥಿಕ ಪ್ರಕ್ಷುಬ್ಧತೆಯಿಂದ ಭಾರತಕ್ಕೆ ಹೆಚ್ಚಿನ ಸಮಸ್ಯೆ ಇಲ್ಲ: ಅರುಣ್ ಜೇಟ್ಲಿ
ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಪ್ರಕ್ಷುಬ್ಧತೆಯಿಂದ ಭಾರತಕ್ಕೆ ಹೆಚ್ಚಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಪ್ರಕ್ಷುಬ್ಧತೆಯಿಂದ ಭಾರತಕ್ಕೆ ಹೆಚ್ಚಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಕೈಗಾರಿಕೋದ್ಯಮಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಭೆಯಲ್ಲಿ ಭಾಗವಹಿಸದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಜೆಟ್ಲಿ, ಸಭೆಯಲ್ಲಿ 27 ಮಂದಿ ಇತ್ತೀಚಿನ ಜಾಗತಿಕ ಬೆಳವಣಿಗೆ ಹಾಗೂ ಭಾರತದ ಮೇಲೆ ಅದರ ಪರಿಣಾಮದ ಬಗ್ಗೆ ಮಾತನಾಡಿದರು, ಈ ಪೈಕಿ ಬಹುತೇಕರು ನಾವು ಅಸ್ಥಿರತೆಗಳ ಹಂತದಲ್ಲಿದ್ದು ಇದು ಭಾರತೀಯ ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಆದರೆ ಭಾರತ ಕಡಿಮೆ ಸಮಸ್ಯೆ ಎದುರಿಸುತ್ತದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.
ಚೀನಾ ರಫ್ತು ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಕಡಿಮೆ ಇವೆ, ಈ ಹಿನ್ನೆಲೆಯಲ್ಲಿ ಚೀನಾ ಕರೆನ್ಸಿ ಅಪಮೌಲ್ಯಗೊಂಡಿರುವುದರಿಂದ ಉಂಟಾಗಿರುವ ಜಾಗತಿಕ ಆರ್ಥಿಕ ಪ್ರಕ್ಷುಬ್ಧತೆಯಿಂದಾಗಿ ಭಾರತ ಹೆಚ್ಚು ಸಮಸ್ಯೆ ಎದುರಿಸುವುದಿಲ್ಲ ಎಂದು ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


