ಚೀನಾದ ಸಂಕಷ್ಟ ಭಾರತಕ್ಕೆ ವರವೇ?: ಪ್ರಧಾನಮಂತ್ರಿ ನರೇಂದ್ರ ಮೋದಿ
ಈಗ ಎಲ್ಲೆಲ್ಲೂ ಹದಗೆಟ್ಟಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯ ಕುರಿತು ಚರ್ಚೆ. ಏಷ್ಯಾದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟ್ರವಾದ ಚೀನಾದಲ್ಲಿ...

ನವದೆಹಲಿ: ಈಗ ಎಲ್ಲೆಲ್ಲೂ ಹದಗೆಟ್ಟಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯ ಕುರಿತು ಚರ್ಚೆ. ಏಷ್ಯಾದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ರಾಷ್ಟ್ರವಾದ ಚೀನಾದಲ್ಲಿ ಹದಗೆಟ್ಟ ಸ್ಥಿತಿಯಿಂದ ಉಂಟಾಗಿರುವ ಜಾಗತಿಕ ಆರ್ಥಿಕ ಪ್ರಕ್ಷುಬ್ಧತೆಯಲ್ಲಿ ಭಾರತ ಹೇಗೆ ನಿಭಾಯಿಸಬಲ್ಲುದು ಎಂಬುದರ ಕುರಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಮತ್ತು ಲಕ್ಷಾಂತರ ವಹಿವಾಟುದಾರರ ಸಭೆ ಕರೆದಿದ್ದಾರೆ.
ಬೆಳಗಿನ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ನ ಮಾಲೀಕ ಮುಕೇಶ್ ಅಂಬಾನಿ, ಹಣಕಾಸು ಸಚಿವ ಅರುಣ್ ಜೇಟ್ಲಿ, ರಾಜ್ಯಪಾಲ ರಘುರಾಮ್ ರಾಜನ್, ಆರ್ಥಿಕ ತಜ್ಞರು ಮತ್ತು ಸರ್ಕಾರಿ ಮತ್ತು ಖಾಸಗಿ ಬ್ಯಾಂಕುಗಳ ಮುಖ್ಯಸ್ಥರು ಭಾಗವಹಿಸಿದ್ದರು.
ಸಭೆಯಲ್ಲಿ ಬಡ್ಡಿದರ ಕಡಿತ ಮಾಡಬೇಕೆಂದು ಮತ್ತು ಚೀನಾದ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಕಳೆದ ವಾರ ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಸಭೆಯಲ್ಲಿ ಅದರ ಮುಖ್ಯಸ್ಥೆ,ಭವಿಷ್ಯದಲ್ಲಿ ಉಜ್ವಲ ಆರ್ಥಿಕ ದೇಶವಾಗಿ ಭಾರತ ಹೊರಹೊಮ್ಮಲಿದೆ ಎಂದು ಹೇಳಿದ್ದರು. ಚೀನಾದಲ್ಲಿನ ಆರ್ಥಿಕ ಕುಸಿತದಿಂದ ಅಲ್ಲಿನ ಹೂಡಿಕೆದಾರರನ್ನು ಭಾರತದತ್ತ ಆಕರ್ಷಿಸಲು ಪ್ರಧಾನಿ ಚಿತ್ತ ಹರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಹೂಡಿಕೆದಾರರನ್ನು ಆಕರ್ಷಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಮಂತ್ರಿ ಸಭೆಯಲ್ಲಿ ಹೇಳಿದರು.
ಆದರೆ ಭಾರತದ ಈ ವರ್ಷದ ವಾರ್ಷಿಕ ಆರ್ಥಿಕ ಪ್ರಗತಿ ಶೇಕಡಾ 7ರಷ್ಟಿದ್ದು,ನಿಧಾನಗತಿಯಲ್ಲಿ ಆರ್ಥಿಕ ಬೆಳವಣಿಗೆಯಾಗುತ್ತಿರುವುದರಿಂದ ಇನ್ನು ಕೂಡ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


