42 ವರ್ಷದ ನಂತರ ಬಡ್ಡಿದರ ಇಳಿಸಿದ ಪಾಕಿಸ್ತಾನ
ಪಾಕಿಸ್ತಾನ ಕೇಂದ್ರ ಬ್ಯಾಂಕ್, ಬರೋಬ್ಬರಿ 42 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಡ್ಡಿದರವನ್ನು ಶೇಕಡ 6ಕ್ಕೆ ಕಡಿತ ಮಾಡಿದೆ. ...

ಪಾಕಿಸ್ತಾನ ಕೇಂದ್ರ ಬ್ಯಾಂಕ್, ಬರೋಬ್ಬರಿ 42 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಡ್ಡಿದರವನ್ನು ಶೇಕಡ 6ಕ್ಕೆ ಕಡಿತ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ಹಣದುಬ್ಬರದಿಂದಾಗಿ ಪಾಕಿಸ್ತಾನದ ಆರ್ಥಿಕತೆ ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಈಗಷ್ಟೇ ಪರಿಸ್ಥಿತಿ ಸುಧಾರಣೆ ಕಾಣುತ್ತಿದೆ.
ಈ ಹಿನ್ನೆಲೆಯಲ್ಲಿ ಹೂಡಿಕೆದಾರರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ದರ ಕಡಿತ ಮಾಡಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಚೀನಾದ ಸಹಯೋಗದಲ್ಲಿ ನಿರ್ಮಾಣವಾಗುತ್ತಿರುವ ಆರ್ಥಿಕ ಕಾರಿಡಾರ್‍ನಿಂದಾಗಿ ಭಾರಿ ಪ್ರಮಾಣದ ಹೂಡಿಕೆ ಹರಿದುಬರಲಿದೆ ಎನ್ನುವ ವಿಶ್ವಾಸವನ್ನು ಅಲ್ಲಿನ ಕೇಂದ್ರ ಬ್ಯಾಂಕ್ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


