ಬಡ್ಡಿದರ ಹೆಚ್ಚಿಸದ ಫೆಡರಲ್ ಬ್ಯಾಂಕ್
ಅಮೆರಿಕದ ಫೆಡರಲ್ ಬ್ಯಾಂಕ್ ತನ್ನ ಪ್ರಮುಖ ಸಾಲಗಳ ಮೇಲಿನ ಬಡ್ಡಿದರಗಳನ್ನು ಯಥಾಸ್ಥಿತಿ ಮುಂದುವರೆಸಿದೆ. ಕಳೆದ ಹತ್ತು ವರ್ಷಗಳಿಂದಲೂ ಫೆಡರಲ್ ರಿಸರ್ವ್ ಬಡ್ಡಿದರ ಶೂನ್ಯದ ಸನಿಹ ಅಂದರೆ ಶೇ.0.25ರ ನಡುವೆ ಮುಂದುವರೆದಿದೆ...

ವಾಷಿಂಗ್ಟನ್: ಅಮೆರಿಕದ ಫೆಡರಲ್ ಬ್ಯಾಂಕ್ ತನ್ನ ಪ್ರಮುಖ ಸಾಲಗಳ ಮೇಲಿನ ಬಡ್ಡಿದರಗಳನ್ನು ಯಥಾಸ್ಥಿತಿ ಮುಂದುವರೆಸಿದೆ. ಕಳೆದ ಹತ್ತು ವರ್ಷಗಳಿಂದಲೂ ಫೆಡರಲ್ ರಿಸರ್ವ್ ಬಡ್ಡಿದರ ಶೂನ್ಯದ ಸನಿಹ ಅಂದರೆ ಶೇ.0.25ರ ನಡುವೆ ಮುಂದುವರೆದಿದೆ.
ಅಮೆರಿಕ ಫೆಡರಲ್ ಬ್ಯಾಂಕ್ ಬಡ್ಡಿದರಗಳನ್ನು ಏರಿಸಿದರೆ ಭಾರತ ಮತ್ತಿತರ ಅಭಿವೃದ್ಧಿಶೀಲ ದೇಶಗಳ ಮಾರುಕಟ್ಟೆಗಳಲ್ಲಿ ಹಣ ತೊಡಗಿಸಿರುವ ವಿದೇಶಿ ಹಣಕಾಸು ಸಂಸ್ಥೆಗಳು ಹೆಚ್ಚಿನ ಬಡ್ಡಿ ಸಿಗಲಿದೆ ಎಂದು ಅಮೆರಿಕದತ್ತ ಮುಖ ಮಾಡಲಿವೆ. ಹೀಗಾಗಿ ಯಥಾಸ್ಥಿತಿ ಮುಂದುವರೆದಿರುವುದು ಅಭಿವೃದ್ಧಿ ದೇಶಗಳ ಪಾಲಿಗೆ ಸ್ವಲ್ಪ ನಿರಾಳತೆ ತಂದಿದೆ. ಗರಿಷ್ಠ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ದರ ಸುಸ್ಥಿರತೆ ಕಾಯ್ದುಕೊಳ್ಳುವ ಉದ್ದೇಶದಿಂದ ಬಡ್ಡಿದರಗಳಲ್ಲಿ ಪರಿಷ್ಕರಣೆ ಮಾಡಿಲ್ಲ ಎಂದು ಸಭೆ ನಂತರ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಫೆಡರಲ್ ಬ್ಯಾಂಕ್ ವಿವರಿಸಿದೆ.
ಸಂಕಷ್ಟದಲ್ಲಿ ಆರ್ಥಿಕತೆ
ರಾಜನ್ ಅಮೆರಿಕ ಮತ್ತು ವಿಶ್ವದ ಆರ್ಥಿಕತೆ ಸಂಕಷ್ಟದಲ್ಲಿದೆ. ಈ ಕಾರಣದಿಂದಾಗಿಯೇ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು ಹೆಚ್ಚಿಸಲಿಲ್ಲ. ಬಡ್ಡಿದರ ಏರಿಕೆಯಿಂದ ವಿಶ್ವ ಮಾತ್ರವಲ್ಲದೆ ಅಮೆರಿಕದ ಆರ್ಥಿಕತೆಗೂ ತೊಂದರೆಯಾಗಲಿದೆ ಎಂದು ಆರ್ಬಿಐ ಗೌರ್ನರ್ ರಘುರಾಂ ರಾಜನ್ ಅಭಿಪ್ರಾಯಪಟ್ಟಿದ್ದಾರೆ.
ಭಾರತಕ್ಕೆ ಒಳಿತು: ಶಕ್ತಿಕಂಠದಾಸ್
ಫೆಡರಲ್ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸದಿರುವ ನಿರ್ಧಾರ ಭಾರತ ದಂತಹ ಅಭಿವೃದ್ಧಿಶೀಲ ದೇಶಗಳಿಗೆ ಒಳ್ಳೆಯದಾಗಿದ್ದು ಇಲ್ಲಿನ ಬಡ್ಡಿದರಗಳನ್ನು ಅಗತ್ಯಕ್ಕೆ ಅನುಗುಣವಾಗಿ ರೂಪಿಸಿಕೊಳ್ಳಬಹುದು ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಂಠ ದಾಸ್ ಅಭಿಪ್ರಾಯಪಟ್ಟಿದ್ದಾರೆ. ಫೆಡರಲ್ ಬ್ಯಾಂಕ್ ಬಡ್ಡಿದರಗಳನ್ನು ಹೆಚ್ಚಿಸಲಿದೆ ಎಂಬ ನಿರೀಕ್ಷೆಗಳಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


