ಹೆಚ್ಚು ಮಳೆಯಿಂದ ವೇಗದ ಅಭಿವೃದ್ಧಿ ಸಾಧ್ಯ: ಅರುಣ್ ಜೇಟ್ಲಿ
ಹವಾಮಾನ ಇಲಾಖೆ ಇತ್ತೀಚೆಗೆ ನೀಡಿರುವ ವರದಿಯಂತೆ ಈ ವರ್ಷ ಭಾರತ ದೇಶದಲ್ಲಿ ಉತ್ತಮ ಮಳೆಯಾದರೆ ವೇಗವಾಗಿ...

ವಾಷಿಂಗ್ಟನ್: ಹವಾಮಾನ ಇಲಾಖೆ ಇತ್ತೀಚೆಗೆ ನೀಡಿರುವ ವರದಿಯಂತೆ ಈ ವರ್ಷ ಭಾರತ ದೇಶದಲ್ಲಿ ಉತ್ತಮ ಮಳೆಯಾದರೆ ವೇಗವಾಗಿ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಉತ್ತಮ ಮಳೆ ಬಂದರೆ ದೇಶದ ರೈತರು ಚೆನ್ನಾಗಿ ಬೆಳೆ ಬೆಳೆಯಬಹುದು. ಇದರಿಂದ ನಮ್ಮ ಆರ್ಥಿಕ ಪ್ರಗತಿ ವೃದ್ಧಿಯಾಗುತ್ತದೆ ಎಂದು ಅವರು ಅಮೆರಿಕದ ವಾಷಿಂಗ್ಟನ್ ನಲ್ಲಿ ಅಂತಾರಾಷ್ಟ್ರೀಯ ಶಾಂತಿ ಕಾರ್ಯಕ್ರಮದಲ್ಲಿ ದೇಶದ ಪ್ರಗತಿಯ ಭವಿಷ್ಯ ಕುರಿತ ಭಾಷಣದಲ್ಲಿ ಹೇಳಿದರು.
ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವರದಿ ಪ್ರಕಾರ, ಈ ವರ್ಷ ಭಾರತದ ಆರ್ಥಿಕ ಪ್ರಗತಿ ಶೇಕಡಾ 7.5ರಷ್ಟಾಗಲಿದೆ ಎಂದು ಹೇಳಿದೆ.
ಭತ್ತ, ಗೋಧಿ, ಸಕ್ಕರೆ ಮತ್ತು ಹತ್ತಿ ಉತ್ಪಾದನೆಯಲ್ಲಿ ವಿಶ್ವದಲ್ಲಿಯೇ ಎರಡನೇ ಸ್ಥಾನದಲ್ಲಿರುವ ಭಾರತ ಕೃಷಿ ಚಟುವಟಿಕೆಗಳಿಗೆ ಮಳೆಯನ್ನೇ ನಂಬಿಕೊಂಡಿದೆ. ಈ ವರ್ಷ ಮಾನ್ಸೂನ್ ಉತ್ತಮವಾಗಿರಬಹುದೆಂದು ಹವಾಮಾನ ಇಲಾಖೆ ವರದಿ ನೀಡುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕ ಹೆಚ್ಚಾಗಿದೆ. ದೇಶದ ಆರ್ಥಿಕ ಪ್ರಗತಿ ಏರಿಕೆಯಾಗುವ ನಿರೀಕ್ಷೆಯಿದ್ದು, ರಿಸರ್ವ್ ಬ್ಯಾಂಕ್ ಇನ್ನಷ್ಟು ದರ ಕಡಿತ ಮಾಡುವ ನಿರೀಕ್ಷೆಯಿದೆ.
ಹಣಕಾಸು ಸಚಿವ ಅರುಣ್ ಜೇಟ್ಲಿಯವರು ವಾಷಿಂಗ್ಟನ್ ನಲ್ಲಿ ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕಿನ ಅರ್ಧ ವಾರ್ಷಿಕ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ವಿಶ್ವದ ಜಿ-20 ರಾಷ್ಟ್ರಗಳ ಸಭೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


