ಇಪಿಎಫ್ ಬಡ್ಡಿದರ ಶೇ.8.7ರಿಂದ ಶೇ.8.8ಕ್ಕೆ ಏರಿಕೆ
ಕಾರ್ಮಿಕ ಸಂಘಟನೆಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೌಕರರ ಭವಿಷ್ಯನಿಧಿ(ಇಪಿಎಫ್) ಠೇವಣಿಯ ಬಡ್ಡಿದರವನ್ನು ಶೇ.8.7ರಿಂದ 8.8ಕ್ಕೆ ಏರಿಕೆ...

Published On :
ನವದೆಹಲಿ: ಕಾರ್ಮಿಕ ಸಂಘಟನೆಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕಡೆಗೂ ನೌಕರರ ಭವಿಷ್ಯನಿಧಿ(ಇಪಿಎಫ್) ಠೇವಣಿಯ ಬಡ್ಡಿದರವನ್ನು ಶೇ.8.7ರಿಂದ 8.8ಕ್ಕೆ ಏರಿಕೆ ಮಾಡಲು ನಿರ್ಧರಿಸಿದೆ.
ಇತ್ತಿಚೀಗಷ್ಟೆ ಇಪಿಎಫ್ ಬಡ್ಡಿದರವನ್ನು 2015–16ನೆ ಸಾಲಿಗೆ ಶೇ 8.7ರಷ್ಟು ನಿಗದಿ ಮಾಡಿ ಕೇಂದ್ರ ಹಣಕಾಸು ಸಚಿವಾಲಯ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಕಾರ್ಮಿಕ ಸಂಘಟನೆಗಳು ಇಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ್ದವು.
ಈ ವಿಷಯದ ಕುರಿತು ಹಣಕಾಸು ಸಚಿವ ಅರುಣ್ ಜೇಟ್ಲಿ ಜತೆ ಚರ್ಚಿಸುವುದಾಗಿ ಭರವಸೆ ನೀಡಿದ್ದ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು, ಶೇ 8.8ರಷ್ಟು ಬಡ್ಡಿದರವನ್ನು ಏಕೆ ನಿಗದಿಮಾಡಬೇಕು ಎನ್ನುವುದಕ್ಕೆ ಎಲ್ಲಾ ರೀತಿಯ ಸಮರ್ಥನೆಯನ್ನೂ ಹಣಕಾಸು ಸಚಿವಾಲಯಕ್ಕೆ ಕೊಡುವುದಾಗಿ ಹೇಳಿದ್ದರು.
ಇಪಿಎಫ್ ಬಡ್ಡಿದರವರನ್ನು ಶೇ 8.8ಕ್ಕೆ ಏರಿಕೆ ಮಾಡುವಂತೆ ಇಪಿಎಫ್‌ಒ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಆದರೆ ಶೇ.8.8 ಬಡ್ಡಿದರ ನೀಡಲೂ ಸಾಧ್ಯವಿಲ್ಲ ಹಣಕಾಸು ಸಚಿವಾಲಯ ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


