ಅಕ್ಟೋಬರ್- ಡಿಸೆಂಬರ್ ನಲ್ಲಿ ಉತ್ಪಾದನಾ ಕ್ಷೇತ್ರದ ಬೆಳವಣಿಗೆ ದರ ಏರಿಕೆ ಸಾಧ್ಯತೆ: ಎಫ್ಐಸಿಸಿಐ
ರಫ್ತು ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್-ಡಿಸೆಂಬರ್ ತಿಂಗಳಲ್ಲಿ ಭಾರತದ ಉತ್ಪಾದನಾ ಕ್ಷೇತ್ರದ ಬೆಳವನಿಗೆ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಎಫ್ಐಸಿಸಿಐ ಅಂದಾಜಿಸಿದೆ.

Published On :
ನವದೆಹಲಿ: ರಫ್ತು ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್-ಡಿಸೆಂಬರ್ ತಿಂಗಳಲ್ಲಿ ಭಾರತದ ಉತ್ಪಾದನಾ ಕ್ಷೇತ್ರದ ಬೆಳವನಿಗೆ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಎಫ್ಐಸಿಸಿಐ ಅಂದಾಜಿಸಿದೆ.
ಜುಲೈ-ಸೆಪ್ಟೆಂಬರ್ ತಿಂಗಳಲ್ಲಿ ಉತ್ಪಾದನಾ ವಲಯದ ಬೆಳವಣಿಗೆ ದರ ಏರಿಕೆಯಾಗಿತ್ತು. ಅಕ್ಟೋಬರ್-ಡಿಸೆಂಬರ್ ತಿಂಗಳಲ್ಲಿ ರಫ್ತು ಪ್ರಮಾಣ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೊಳಪಟ್ಟವರು ಈಗಲೂ ಬೆಳವಣಿಗೆ ದರ ಏರಿಕೆಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಎಫ್ಐಸಿಸಿಐ ಬಹಿರಂಗಪಡಿಸಿರುವ ಉತ್ಪಾದನಾ ಕ್ಷೇತ್ರಕ್ಕೆ ಸಂಬಂಧಿಸಿದ ಸಮೀಕ್ಷಾ ವರದಿ ಮೂಲಕ ತಿಳಿದುಬಂದಿದೆ.
ಉತ್ಪಾದನಾ ಕ್ಷೇತ್ರದ ಬೆಳವಣಿಗೆ ಬಗ್ಗೆ ನಕಾರಾತ್ಮಕ ಅಂದಾಜುಗಳನ್ನು ವ್ಯಕ್ತಪಡಿಸುತ್ತಿರುವವರ ಸಂಖ್ಯೆ ಕಡಿಮೆಯಾಗಿದ್ದು, ಕೇವಲ ಶೇ.11 ರಷ್ಟು ಮಾತ್ರ ನಕಾರಾತ್ಮಕ ಅಭಿಪ್ರಾಯ ಹೊಂದಿದ್ದಾರೆ ಎಂದು ಎಫ್ಐಸಿಸಿಐ ತಿಳಿಸಿದೆ. ನವೆಂಬರ್ ತಿಂಗಳಲ್ಲಿ ನೋಟು ಅಮಾನ್ಯ ನಿರ್ಧಾರದಿಂದ ಉತ್ಪಾದನಾ ಬೆಳವಣಿಗೆ ದರ ಕುಂಠಿತವಾಗಿತ್ತು. ಆದರೆ ಆರ್ ಬಿಐ ಉತ್ಪಾದನಾ ಕ್ಷೇತ್ರಕ್ಕೆ ಸಂಬಂಧಿಸಿದ ಕೆಲವು ನೀತಿಗಳನ್ನು ಸಡಿಲಗೊಳಿಸುವ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


