ವಾಣಿಜ್ಯ

ಉಳಿತಾಯ ಠೇವಣಿಗಳನ್ನು ಮಾರುಕಟ್ಟೆ ದರಗಳ ಜೊತೆಗೆ ತಳಕು ಹಾಕಲು ಕೇಂದ್ರ ನಿರ್ಧಾರ

ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಇನ್ನು ಮುಂದೆ ವರ್ಷಕ್ಕೊಮ್ಮೆ ಪರಿಷ್ಕರಿಸುವ ಬದಲು ಮೂರು ತಿಂಗಳಿಗೊಮ್ಮೆ ಪರಿಷ್ಕರಿಸಲಾಗುವುದು.

ಉಳಿತಾಯ ಠೇವಣಿಗಳನ್ನು ಮಾರುಕಟ್ಟೆ ದರಗಳ ಜೊತೆಗೆ ತಳಕು ಹಾಕಲು ಕೇಂದ್ರ ನಿರ್ಧಾರ
ಶಕ್ತಿಕಾಂತ ದಾಸ್
Published On :
ನವದೆಹಲಿ: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಇನ್ನು ಮುಂದೆ ವರ್ಷಕ್ಕೊಮ್ಮೆ ಪರಿಷ್ಕರಿಸುವ ಬದಲು ಮೂರು ತಿಂಗಳಿಗೊಮ್ಮೆ ಪರಿಷ್ಕರಿಸಲಾಗುವುದು. ಇನ್ಮುಂದೆ ಈ ಬಡ್ಡಿದರಗಳು ಮಾರುಕಟ್ಟೆ ದರಗಳಿಗೆ ತಕ್ಕಂತೆ ಬದಲಾಗಲಿವೆ.
ಆದಾಗ್ಯೂ, ಹೆಣ್ಣು ಮಕ್ಕಳ ಸುಕನ್ಯಾ ಸಮೃದ್ಧಿ ಮತ್ತು ಹಿರಿಯ ನಾಗರಿಕರ ಉಳಿತಾಯ ಠೇವಣಿಗಳಿಗೆ ಸಂಬಂಧಿಸಿದಂತೆ ಬಡ್ಡಿ ದರಗಳು ಬದಲಾಗುವುದಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಸಣ್ಣ ಉಳಿತಾಯ ಯೋಜನೆಗಳ ದರ ಕಡಿತ ಮಾಡುವ ಮೂಲಕ ಸರ್ಕಾರಕ್ಕೆ ಒಂದು ವರ್ಷದಲ್ಲಿ 700 ಮಿಲಿಯನ್ ಡಾಲರ್ ಲಾಭವಾಗಲಿದೆ ಎಂದು ಅಂದಾಜಿಸಲಾಗಿದೆ.
ಹೊಸ ಬಡ್ಡಿ ದರಗಳು ಈ ವರ್ಷದ ಏಪ್ರಿಲ್ ತಿಂಗಳಿನಿಂದ ಅನ್ವಯವಾಗಲಿವೆ. 
ಅಂಚೆ ಕಚೇರಿ ಮಾಸಿಕ ವರಮಾನ ಯೋಜನೆ, ಸಾರ್ವಜನಿಕ ಭವಿಷ್ಯ ನಿಧಿ, ಅಂಚೆ ಕಚೇರಿ ಸ್ಥಿರ ಠೇವಣಿ, ಹಿರಿಯ ನಾಗರಿಕರ ಉಳಿತಾಯ ಯೋಜನೆ ಮತ್ತು ಸುಕನ್ಯಾ ಸಮೃದ್ಧಿ ಖಾತೆಗಳು ಸಣ್ಣ ಉಳಿತಾಯ ಯೋಜನೆ ವ್ಯಾಪ್ತಿಗೆ ಬರುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.