ರಿಲಯನ್ಸ್ ಲಾಭ ಶೇ.38 ಏರಿಕೆ
ದೇಶದ ಖಾಸಗಿ ವಲಯದ ಅತಿದೊಡ್ಡ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಮೂರನೆ ತ್ರೈಮಾಸಿಕದಲ್ಲಿ ಮಾರುಕಟ್ಟೆ ಅಂದಾಜುಗಳನ್ನು ಮೀರಿ ಲಾಭ ಗಳಿಸಿದೆ...

ನವದೆಹಲಿ: ದೇಶದ ಖಾಸಗಿ ವಲಯದ ಅತಿದೊಡ್ಡ ಕಂಪನಿ ರಿಲಯನ್ಸ್ ಇಂಡಸ್ಟ್ರೀಸ್ ಮೂರನೆ ತ್ರೈಮಾಸಿಕದಲ್ಲಿ ಮಾರುಕಟ್ಟೆ ಅಂದಾಜುಗಳನ್ನು ಮೀರಿ ಲಾಭ ಗಳಿಸಿದೆ.
ಡಿಸೆಂಬರ್ ಅಂತ್ಯಕ್ಕೆ ಕೊನೆಗೊಂಡ ಈ ಅವಧಿಯಲ್ಲಿ ಕಂಪನಿ ರು.7,290 ಕೋಟಿ ನಿವ್ವಳ ಲಾಭ ಗಳಿಸಿದೆ. ಕಂಪನಿ ಕಳೆದ ವರ್ಷ ಇದೇ ಅವಧಿಯಲ್ಲಿ ಗಳಿಸಿದ್ದ ರು.5,256 ಕೋಟಿಗೆ ಹೋಲಿಸಿದರೆ ಶೇ.38ರಷ್ಟು ಏರಿಕೆ ದಾಖಲಿಸಿದೆ. ಹಾಗಿದ್ದರೂ ಕಂಪನಿ ಮಾರಾಟ ಶೇ.24ರಷ್ಟು ಕುಸಿದು ರು.73,341 ಕೋಟಿಗೆ ತಲುಪಿದೆ. ಈ ತ್ರೈಮಾಸಿಕದಲ್ಲಿ ತೈಲ ರಿಫೈನಿಂಗ್‍ನಿಂದ ಗಳಿಸಿದ ಆದಾಯ ಕಳೆದ ಏಳು ವರ್ಷಗಳಲ್ಲೇ ಅತ್ಯಧಿಕವಾಗಿದೆ ಎಂದು ಮಂಗಳವಾರ ಪ್ರಕಟಿಸಿದ ಹಣಕಾಸು ವರದಿಗಳಲ್ಲಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


