ವಾಣಿಜ್ಯ

ದೇವರ ಭಾವಚಿತ್ರವುಳ್ಳ ಡೋರ್ ಮ್ಯಾಟ್ ಮಾರಾಟ: ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ಅಮೆಜಾನ್

ಹಿಂದೂ ದೇವರ ಚಿತ್ರವುಳ್ಳ ಡೋರ್ ಮ್ಯಾಟ್ ಗಳನ್ನು ಮಾರಾಟ ಮಾಡುತ್ತಿದ್ದ ಆನ್ ಲೈನ್ ಮಾರಾಟ ಸಂಸ್ಥೆ ಅಮೇಜಾನ್ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ದೇವರ ಭಾವಚಿತ್ರವುಳ್ಳ ಡೋರ್ ಮ್ಯಾಟ್ ಮಾರಾಟ: ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ಅಮೆಜಾನ್
ಅಮೇಜಾನ್
Published On :

ನವದೆಹಲಿ: ಹಿಂದೂ ದೇವರ ಭಾವಚಿತ್ರವುಳ್ಳ ಡೋರ್ ಮ್ಯಾಟ್ ಗಳನ್ನು ಮಾರಾಟ ಮಾಡುತ್ತಿದ್ದ ಆನ್ ಲೈನ್ ಮಾರಾಟ ಸಂಸ್ಥೆ ಅಮೇಜಾನ್ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ನೆಟ್ ಬಳಕೆದಾರರಲ್ಲಿ ಅಮೆಜಾನ್ ನ ಕೃತ್ಯಕ್ಕೆ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಮೆಜಾನ್ ನನ್ನು ಬಹಿಷ್ಕರಿಸುವಂತೆ ಕರೆ ನೀಡಲಾಗಿದೆ. ಟ್ವಿಟರ್ ನಲ್ಲಿ ಬಾಯ್ಕಾಟ್ ಅಮೆಜಾನ್ ವಿಷಯ ಕೆಲಕಾಲ ಟ್ರೆಂಡಿಂಗ್ ನಲ್ಲಿತ್ತು.  
ಕೇವಲ ಹಿಂದೂ ದೇವರುಗಳು ಮಾತ್ರವಲ್ಲದೇ ಜೀಸಸ್, ಕುರಾನ್ ನ ಚಿತ್ರವುಳ್ಳ ಡೋರ್ ಮ್ಯಾಟ್ ಗಳನ್ನೂ ಸಹ ಅಮೆಜಾನ್ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಅಮೆಜಾನ್ ದೇವರ ಭಾವಚಿತ್ರವುಳ್ಳ ಡೋರ್ ಮ್ಯಾಟ್ ಗಳ ಉತ್ಪನ್ನಗಳನ್ನು ವಾಪಸ್ ಪಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.