ಜಿಎಸ್ ಟಿ ಮಸೂದೆಯನ್ನು ಎಲ್ಲಾ ರಾಜ್ಯಗಳು ಒಪ್ಪಿವೆ; ಪ್ರಮುಖ ಘಟ್ಟದಲ್ಲಿದೆ: ಅರುಣ್ ಜೇಟ್ಲಿ
ತಮಿಳುನಾಡು ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಯೋಜನೆಗೆ ಬೆಂಬಲ...
ನವದೆಹಲಿ: ತಮಿಳುನಾಡು ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳು ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಯೋಜನೆಗೆ ಬೆಂಬಲ ಸೂಚಿಸಿವೆ ಮತ್ತು ಸ್ವೀಕರಿಸಿವೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಇಲ್ಲಿಯವರೆಗೆ ಪ್ರತಿಯೊಂದು ರಾಜ್ಯ ಜಿಎಸ್ ಟಿಗೆ ಸಂಬಂಧಪಟ್ಟಂತೆ ವಿವರವಾದ ಅಭಿಪ್ರಾಯ ವ್ಯಕ್ತಪಡಿಸಿವೆ ಮತ್ತು ಒಪ್ಪಿಕೊಂಡಿವೆ. ತಮಿಳುನಾಡು ರಾಜ್ಯ ಮಾತ್ರ ಕೆಲವೊಂದು ಬದಲಾವಣೆಗಳನ್ನು ಬಯಸಿದೆ ಎಂದು ಹಣಕಾಸು ಸಚಿವರು ನಿನ್ನೆ ಕೋಲ್ಕತ್ತಾದಲ್ಲಿ 22 ರಾಜ್ಯಗಳ ಹಣಕಾಸು ಸಚಿವರ ಉನ್ನತಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ನಿನ್ನೆ ಮತ್ತು ಇಂದು ನಡೆಯಲಿರುವ ಸಭೆಯಲ್ಲಿ ಮಾದರಿ ಸರಕು ಮತ್ತು ಸೇವಾ ತೆರಿಗೆಗಳ ಕಾನೂನಿನ ಕುರಿತು ಚರ್ಚೆ ನಡೆಯಲಿದೆ.
ಕೇಂದ್ರ ಸರ್ಕಾರ ಪರೋಕ್ಷ ತೆರಿಗೆಯನ್ನು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ತರಲು ಯೋಜಿಸಿದ್ದು, ಜಿಎಸ್ ಟಿ ಮಸೂದೆ ರಾಜ್ಯಸಭೆಯಲ್ಲಿ ಅನುಮೋದನೆಗೆ ಕಾದು ಕುಳಿತಿದೆ. ಮುಂಬರುವ ಮುಂಗಾರು ಅಧಿವೇಶನದಲ್ಲಿ ಜಿಎಸ್ ಟಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಸರ್ಕಾರ ಮಂಡಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

