ತೈಲ ನಿಕ್ಷೇಪ ಪತ್ತೆಗೆ ಉತ್ತೇಜನ, ಬೆಲೆ ನಿಗದಿಗೆ ಹೊಸ ನೀತಿ ಪ್ರಕಟಿಸಿದ ಕೇಂದ್ರ ಸಚಿವ ಸಂಪುಟ
ವಿವಿಧ ಕ್ಷೇತ್ರಗಳಲ್ಲಿ ಉತ್ಪಾದನೆ ಮಾಡಲಾಗುತ್ತಿರುವ ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ.

ನವದೆಹಲಿ: ವಿವಿಧ ಕ್ಷೇತ್ರಗಳಲ್ಲಿ ಉತ್ಪಾದನೆ ಮಾಡಲಾಗುತ್ತಿರುವ ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಧರ್ಮೇಂದ್ರ ಪ್ರಧಾನ್, ಸುಮಾರು 180,000 ಕೋಟಿ ರೂ ಮೌಲ್ಯದ ತೈಲ ನಿಕ್ಷೇಪಗಳನ್ನು ಹೊರತೆಗೆಯಲು ಅಗತ್ಯವಿರುವ ಕ್ರಮ ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ತೈಲ ನಿಕ್ಷೇಪಗಳನ್ನು ಹೊರತೆಗೆಯಲು, ಉತ್ಪಾದನೆಯನ್ನು ಉತ್ತೇಜಿಸುವುದಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಪತ್ತೆಯಾಗುತ್ತಿರುವ ಹಾಗೂ ಉತ್ಪಾದನೆ ಮಾಡಲಾಗುತ್ತಿರುವ ಹೈಡ್ರೋ ಕಾರ್ಬನ್ ಗಳ ಬೆಲೆ ನಿಗದಿಗೆ ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ಆದಾಯ-ಹಂಚಿಕೆಯ ಮಾದರಿಯನ್ನೊಳಗೊಂಡ ಹೊಸ ತೈಲ ಮತ್ತು ಅನಿಲ ಪರಿಶೋಧನೆ ನೀತಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಅತಿ ಹೆಚ್ಚು ಆಳವಿರುವ ನೀರಿನ ಪ್ರದೇಶ, ಹೆಚ್ಚಿನ ಒತ್ತಡ ಹೆಚ್ಚಿನ ಉಷ್ಣಾಂಶ ಪ್ರದೇಶಗಳನ್ನು ತೈಲನಿಕ್ಷೇಪ ಮಾಡುವ ಕಠಿಣ ಪ್ರದೇಶಗಳು ಎಂದು ಗುರುತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


