ಮೂರು ತಿಂಗಳ ನಂತರ ಗರಿಷ್ಠ ಮಟ್ಟಕ್ಕೆ ಏರಿದ ಸೆನ್ಸೆಕ್ಸ್
ಸಾಗರೋತ್ತರ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ...

Published On :
ಮುಂಬೈ: ಸಾಗರೋತ್ತರ ಮಾರುಕಟ್ಟೆಗಳ ಚೇತರಿಕೆಯ ವಹಿವಾಟಿನಿಂದಾಗಿ ಶೇರುಪೇಟೆಯ ಸೂಚ್ಯಂಕ ಇಂದಿನ ವಹಿವಾಟಿನ ಮುಕ್ತಾಯಕ್ಕೆ 576 ಪಾಯಿಂಟ್‌ಗಳ ಏರಿಕೆ ಕಂಡಿದೆ.
ಮೂರು ತಿಂಗಳ ನಂತರ ಪ್ರಥಮ ಬಾರಿಗೆ 576 ಪಾಯಿಂಟ್ ಗಳ ಏರಿಕೆ ಕಂಡು 25,881.17 ಅಂಕಗಳಿಗೆ ತಲುಪಿದೆ. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ ಕೂಡ 186.05 ಅಂಕಗಳ ಏರಿಕೆಯನ್ನು ದಾಖಲಿಸಿ 7,934.90 ಮಟ್ಟವನ್ನು ತಲುಪುವದರೊಂದಿಗೆ ದಿನದ ವಹಿವಾಟನ್ನು ಕೊನೆಗೊಳಿಸಿತು.
ಅಮೆರಿಕದಲ್ಲಿ ದರ ಏರಿಕೆಯಾಗಿರುವುದರಿಂದ ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಹಾಗಾಗಿ, ಹೂಡಿಕೆದಾರರು ಹೆಚ್ಚಾಗಿ ಭಾರತೀಯ ಶೇರುಗಳ ಮೇಲೆ ಹೂಡಿಕೆ ಮಾಡುತ್ತಿದ್ದಾರೆ.
ಇದರ ಪರಿಣಾಮ ಸೆನ್ಸೆಕ್ಸ್ ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿದ್ದು, ದಿನದ ಅತ್ಯಂತ ಗರಿಷ್ಠ 25,897.87 ಅಂಕಗಳಿಗೆ ಏರಿದೆ. ಅಂತಿಮವಾಗಿ 575.70 ಅಂಕಗಳ ಏರಿಕೆಯೊಂದಿಗೆ ತಿಂಗಳ ಗರಿಷ್ಠ ಮಟ್ಟ 25,881.17 ಅಂಕಗಳಿಗೆ ಏರಿಕೆಯಾಗಿದೆ.
ಪ್ರಮುಖವಾಗಿ ಸಿಪ್ಲಾ ಸಂಸ್ಥೆಯ ಶೇರುಗಳ ಮೌಲ್ಯ ಶೇ.4.97 ಏರಿಕೆಯಾಗಿದ್ದು, ಬಿಎಚ್ ಇಎಲ್ ಶೇ.4.34, ಬಜಾಜ್ ಆಟೋ ಶೇ.3.96ರಷ್ಟು ಏರಿಕೆ ಕಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


