ವಾಣಿಜ್ಯ

ನೋಟ್ ನಿಷೇಧ: ಭಾರಿ ಮೊತ್ತದ ಹಣ ಜಮೆ ಮಾಡಿದವರಿಗೆ ಐಟಿ ನೋಟಿಸ್

ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಬ್ಯಾಂಕ್ ಗಳ ಖಾತೆಗೆ ಭಾರಿ ಮೊತ್ತದ ನಗದು ಜಮೆ ಮಾಡುತ್ತಿರುವ...

ನೋಟ್ ನಿಷೇಧ: ಭಾರಿ ಮೊತ್ತದ ಹಣ ಜಮೆ ಮಾಡಿದವರಿಗೆ ಐಟಿ ನೋಟಿಸ್
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಕೇಂದ್ರ ಸರ್ಕಾರ 500 ಹಾಗೂ 1000 ರುಪಾಯಿ ನೋಟ್ ನಿಷೇಧಿಸಿದ ನಂತರ ಬ್ಯಾಂಕ್ ಗಳ ಖಾತೆಗೆ ಭಾರಿ ಮೊತ್ತದ ನಗದು ಜಮೆ ಮಾಡುತ್ತಿರುವ ನೂರಾರು ಮಂದಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ.
ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಆದಾಯ ತೆರಿಗೆ ಇಲಾಖೆ, ದೇಶಾದ್ಯಂತ ಹಲವು ಮಂದಿಗೆ ನೋಟಿಸ್ ನೀಡಿದ್ದು, ಹಣದ ಮೂಲದ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಮ್ಮ ಖಾತೆಗಳಿಗೆ 2.5 ಲಕ್ಷಕ್ಕಿಂತ ಹೆಚ್ಚು ಹಣ ಜಮೆ ಮಾಡುತ್ತಿರುವ ಅನುನಾಸ್ಪದ ಕೆಲವು ವ್ಯಕ್ತಿಗಳ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ ನಂತರ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನವೆಂಬರ್ 8ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಪ್ಪುಹಣ, ಭ್ರಷ್ಟಾಚಾರ ಹಾಗೂ ನಕಲಿ ನೋಟ್ ಗಳ ಹಾವಳಿ ತಡೆಯುವುದಕ್ಕಾಗಿ 500 ಹಾಗೂ 1000 ನೋಟ್ ನಿಷೇಧಿಸುವುದಾಗಿ ಘೋಷಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.