ವಾಣಿಜ್ಯ

ಸೆಪ್ಟೆಂಬರ್ ತಿಂಗಳ ಹಣದುಬ್ಬರ ಇಳಿಕೆ

ಸೆಪ್ಟೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರ ಶೇ. 5.05 ರಿಂದ ಶೇ.4.31 ಕ್ಕೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಸೆಪ್ಟೆಂಬರ್ ತಿಂಗಳ ಹಣದುಬ್ಬರ ಇಳಿಕೆ
ಸೆಪ್ಟೆಂಬರ್ ತಿಂಗಳ ಹಣದುಬ್ಬರ ಇಳಿಕೆ
Published On :

ನವದೆಹಲಿ: ಸೆಪ್ಟೆಂಬರ್ ತಿಂಗಳ ಚಿಲ್ಲರೆ ಹಣದುಬ್ಬರ ಶೇ. 5.05 ರಿಂದ ಶೇ.4.31 ಕ್ಕೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಕಳೆದ ವರ್ಷದ ಸೆಪ್ಟೆಂಬರ್ ತಿಂಗಳ ಹಣದುಬ್ಬರದಿಂದ ಪ್ರಸಕ್ತ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಹಣದುಬ್ಬರದ ಪ್ರಮಾಣ ಕಡಿಮೆಯಾಗಿದ್ದು, ಕಳೆದ ವರ್ಷದ ಆಗಸ್ಟ್- ಸೆಪ್ಟೆಂಬರ್ ನಲ್ಲಿ ಹಣದುಬ್ಬರ ಶೇ.4.41 ರಷ್ಟು ದಾಖಲಾಗಿತ್ತು. ಅ.13 ರಂದು ಕಳೆದ ತಿಂಗಳ ಹಣದುಬ್ಬರ ಅಂಕಿ ಅಂಶಗಳು ಪ್ರಕಟವಾಗಿದೆ. ಆಗಸ್ಟ್‌ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಕನಿಷ್ಠ ಮಟ್ಟವಾದ ಶೇ 5.05ಕ್ಕೆ ಇಳಿದಿತ್ತು. ತರಕಾರಿ, ಆಹಾರ ಮತ್ತು ಪಾನೀಯಗಳ ಬೆಲೆ ಏರಿಕೆಯ ಗತಿಯು ನಿಧಾನವಾಗಿದ್ದರಿಂದ ಚಿಲ್ಲರೆ ಹಣದುಬ್ಬರ ಕಡಿಮೆಯಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.