ಟಾಟಾ ಅಧ್ಯಕ್ಷ ಸೈರಸ್ ಮಿಸ್ತ್ರಿ ವಜಾ, ಮತ್ತೆ ಅಧ್ಯಕ್ಷರಾಗಿ ರತನ್ ಟಾಟಾ
ಟಾಟಾ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ಸೈರಸ್ ಮಿಸ್ತ್ರಿ ಅವರನ್ನು ವಜಾ ಮಾಡಲಾಗಿದ್ದು, ಮಧ್ಯಂತರ ಅಧ್ಯಕ್ಷರಾಗಿ ರತನ್ ಟಾಟಾ ಮುಂದುವರೆಯಲಿದ್ದಾರೆ...

Published On :
ಮುಂಬೈ: ಟಾಟಾ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ಸೈರಸ್ ಮಿಸ್ತ್ರಿ ಅವರನ್ನು ವಜಾ ಮಾಡಲಾಗಿದ್ದು, ಮಧ್ಯಂತರ ಅಧ್ಯಕ್ಷರಾಗಿ ರತನ್ ಟಾಟಾ ಮುಂದುವರೆಯಲಿದ್ದಾರೆ.
ಟಾಟಾ ಸಮೂಹ ಸಂಸ್ಥೆಯಲ್ಲಿ ಬಹುದೊಡ್ಡ ಬದಲಾವಣೆಯನ್ನು ಮಾಡಲಾಗಿದ್ದು, ಮಿಸ್ತ್ರಿ ಅವರನ್ನು ವಜಾ ಮಾಡಿ ಅವರ ಜಾಗಕ್ಕೆ ರತನ್ ಟಾಟಾ ಅವರನ್ನು ಮುಂದುವರೆಸುವುದಾಗಿ ತೀರ್ಮಾನಿಸಲಾಗಿದೆ.
ಇನ್ನು ರತನ್ ಟಾಟಾ ಅವರು ನಾಲ್ಕು ತಿಂಗಳ ಕಾಲವಧಿಗೆ ಟಾಟಾ ಸಮೂಹದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು ಅಷ್ಟರೊಳಗೆ ಆಯ್ಕೆ ಸಮಿತಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಿದ್ದಾರೆ.
ಸೈರಸ್ ಮಿಸ್ತ್ರಿ ಅವರು 2012ರ ಡಿಸೆಂಬರ್ 29 ರಂದು ರತನ್ ಟಾಟಾ ಬದಲಿಗೆ ಟಾಟಾ ಸಮೂಹದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಅಧ್ಯಕ್ಷRatan Tataರತನ್ ಟಾಟಾchairmanCyrus MistryTata Sonsinterimಸೈರಸ್ ಮಿಸ್ತ್ರಿಟಾಟಾ ಸಮೂಹಮಧ್ಯಂತರ ಅಧ್ಯಕ್ಷ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


