ವಾಣಿಜ್ಯ

ಭಾರತದೊಂದಿಗೆ ವಾಣಿಜ್ಯ ವಹಿವಾಟು ಸ್ಥಗಿತಗೊಳಿಸಲು ಪಾಕ್ ಚಿಂತನೆ?

ದ್ವಿಪಕ್ಷೀಯ ಸಂಬಂಧ ಶೀಘ್ರವೇ ಸುಧಾರಣೆಯಾಗದೆ ಇದ್ದರೆ, ಭಾರತದೊಂದಿಗಿನ ವ್ಯಾಪಾರ, ವಾಣಿಜ್ಯ ವಹಿವಾಟುಗಳನ್ನು ಸ್ಥಗಿತಗೊಳಿಸುವ ಆಯ್ಕೆ ಬಗ್ಗೆ ಪಾಕಿಸ್ತಾನದ ವ್ಯಾಪಾರ ಸಂಸ್ಥೆ ಚಿಂತನೆ ನಡೆಸಿದೆ

ಭಾರತದೊಂದಿಗೆ ವಾಣಿಜ್ಯ ವಹಿವಾಟು ಸ್ಥಗಿತಗೊಳಿಸಲು ಪಾಕ್ ಚಿಂತನೆ?
ಭಾರತದೊಂದಿಗೆ ವಾಣಿಜ್ಯ ವಹಿವಾಟು ಸ್ಥಗಿತಗೊಳಿಸಲು ಪಾಕ್ ಚಿಂತನೆ?
Published On :

ಇಸ್ಲಾಮಾಬಾದ್: ದ್ವಿಪಕ್ಷೀಯ ಸಂಬಂಧ ಶೀಘ್ರವೇ ಸುಧಾರಣೆಯಾಗದೆ ಇದ್ದರೆ, ಭಾರತದೊಂದಿಗಿನ ವ್ಯಾಪಾರ, ವಾಣಿಜ್ಯ ವಹಿವಾಟುಗಳನ್ನು ಸ್ಥಗಿತಗೊಳಿಸುವ ಆಯ್ಕೆ ಬಗ್ಗೆ ಪಾಕಿಸ್ತಾನದ ವ್ಯಾಪಾರ ಸಂಸ್ಥೆ ಚಿಂತನೆ ನಡೆಸಿದೆ ಎಂದು ಮಾಧ್ಯಮ ವರದಿಯೊಂದು ತಿಳಿಸಿದೆ.

ಪ್ರಸ್ತುತ ಎದುರಾಗಿರುವ ಸನ್ನಿವೇಶದಲ್ಲಿ ಭಾರತದೊಂದಿಗೆ ವ್ಯಾಪಾರ ವಾಣಿಜ್ಯ ವಹಿವಾಟುಗಳನ್ನು ನಡೆಸಲು ಪಾಕಿಸ್ತಾನಕ್ಕೆ ಯಾವುದೇ ಅನಿವಾರ್ಯತೆ ಇಲ್ಲ ಎಂದು ಪಾಕಿಸ್ತಾನದ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ ಅಧ್ಯಕ್ಷ ಅಬ್ದುಲ್ ರೌಫ್ ಆಲಂ ಹೇಳಿರುವುದನ್ನು ಡಾನ್ ಪತ್ರಿಕೆ ವರದಿ ಮಾಡಿದೆ. ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವ ಪರಿಣಾಮ ಭಾರತದೊಂದಿಗಿನ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸುವ ಬಗ್ಗೆ ಪಾಕಿಸ್ತಾನದ ಉದ್ಯಮಿಗಳು ಒಗ್ಗಟ್ಟಿನಿಂದ ಇದ್ದು ಒಮ್ಮತದ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅಬ್ದುಲ್ ರೌಫ್ ಆಲಂ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.