ಭಾರತದಲ್ಲಿನ ಹೂಡಿಕೆ ಚೀನಾ ಬಂಡವಾಳಕ್ಕೆ ಒಳ್ಳೆಯದು: ವರದಿ
ಒಂದೆಡೆ ಭಾರತದಲ್ಲಿ ಚೀನಾ ಸರಕು ಬಹಿಷ್ಕಾರಕ್ಕೆ ಕರೆ ನೀಡಲಾಗಿದ್ದರೆ, ಮತ್ತೊಂದೆಡೆ ಭಾರತದಲ್ಲಿ ಹೂಡಿಕೆ ಮಾಡುವುದು ಚೀನಾ ಬಂಡವಾಳಕ್ಕೆ ಒಳ್ಳೆಯದು ಎಂದು ಚೀನಾ ತಜ್ಞರು ಹೇಳಿದ್ದಾರೆ.

ಬೀಜಿಂಗ್: ಒಂದೆಡೆ ಭಾರತದಲ್ಲಿ ಚೀನಾ ಸರಕು ಬಹಿಷ್ಕಾರಕ್ಕೆ ಕರೆ ನೀಡಲಾಗಿದ್ದರೆ, ಮತ್ತೊಂದೆಡೆ ಭಾರತದಲ್ಲಿ ಹೂಡಿಕೆ ಮಾಡುವುದು ಚೀನಾ ಬಂಡವಾಳಕ್ಕೆ ಒಳ್ಳೆಯದು ಎಂದು ಚೀನಾ ತಜ್ಞರು ಹೇಳಿದ್ದಾರೆ.
ಭಾರತದಲ್ಲಿ ಹೂಡಿಕೆ ಮಾಡಿದರೆ ಚೀನಾ ಬಂಡವಾಳಕ್ಕೆ ಒಳ್ಳೆಯದಾಗಲಿದೆ ಎಂಬುದಕ್ಕೆ ಹಲವಾರು ಕಾರಣಗಳಿದ್ದು, ಬಂಡವಾಳ ಲಾಭವಾಗಿ ಪರಿವರ್ತನೆಯಾಗಲಿದೆ ಎಂದು ಚೀನಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಹೊರಗಿನಿಂದ ಹರಿದುಬರುತ್ತಿರುವ ವಿದೇಶಿ ನೇರ ಬಂಡವಾಳ ಹೂಡಿಕೆ, ಭಾರತಕ್ಕೆ ಲಾಭ ಮಾಡಿಕೊಡಲು ಯತ್ನಿಸುವುದಿಲ್ಲ, ಆದರೆ ಭಾರತದ ಆರ್ಥಿಕತೆ ಬೆಳವಣಿಗೆ ಹಾಗು ಅನುಕೂಲಕರ ನೀತಿಗಳಿಂದ ಹೂಡಿಕೆದಾರರಲ್ಲಿ ಲಾಭದ ಬಗ್ಗೆ ಭರವಸೆಯನ್ನು ನೀಡುತ್ತವೆ ಎಂದು ಚೀನಾ ಆರ್ಥಿಕ ತಜ್ಞರೊಬ್ಬರು ಅಲ್ಲಿನ ಗ್ಲೋಬಲ್ ಟೈಮ್ಸ್ ಪತ್ರಿಕೆಯಲ್ಲಿ ಬರೆದಿದ್ದಾರೆ.
ಭಾರತ ಹೂಡಿಕೆ ಸ್ನೇಹಿ ವಾತಾವರಣವನ್ನು ಸುಧಾರಣೆ ಮಾಡುತ್ತಿದ್ದು, ವಿದೇಶಿ ನೇರ ಬಂಡವಾಳ ಹೂಡಿಕೆಯ ನಿಯಮಗಳನ್ನು ನರೇಂದ್ರ ಮೋದಿ ಸರ್ಕಾರ ಬದಲಾವಣೆ ಮಾಡಿದ್ದು, ಭಾರತದ ಉತ್ಪಾದನಾ ಅಭಿವೃದ್ಧಿಯನ್ನು ಸೀಮಿತಗೊಳಿಸುವ ಸಾಮರ್ಥ್ಯ ಚೀನಾಗೆ ಇಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


