ವಾಣಿಜ್ಯ

ಪತಂಜಲಿ ಸಂಸ್ಥೆಯಿಂದ ಶೀಘ್ರವೇ ಸ್ವದೇಶಿ ಜೀನ್ಸ್ ಬಿಡುಗಡೆ

ಯೋಗ ಗುರು ರಾಮ್ ದೇವ್ ಅವರ ಪತಂಜಲಿ ಸಂಸ್ಥೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಿದ್ಧತೆ ನಡೆಸಿದ್ದು, ಫಾಸ್ಟ್-ಮೂವಿಂಗ್ ಕನ್ಸೂಮರ್ ಉತ್ಪನ್ನಗಳ ಮೂಲಕ ಪಾಕಿಸ್ತಾನ, ಅಫ್ಘಾನಿಸ್ತಾನದ ಮಾರುಕಟ್ಟೆಗಳನ್ನೂ ಪ್ರವೇಶಿಸುವ ಉದ್ದೇಶ ಹೊಂದಿದೆ.

ಪತಂಜಲಿ ಸಂಸ್ಥೆಯಿಂದ ಶೀಘ್ರವೇ ಸ್ವದೇಶಿ ಜೀನ್ಸ್ ಬಿಡುಗಡೆ
ಬಾಬಾ ರಾಮ್ ದೇವ್
Published On :

ನಾಗ್ಪುರ: ಯೋಗ ಗುರು ರಾಮ್ ದೇವ್ ಅವರ ಪತಂಜಲಿ ಸಂಸ್ಥೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಲಗ್ಗೆ ಇಡಲು ಸಿದ್ಧತೆ ನಡೆಸಿದ್ದು, ಫಾಸ್ಟ್-ಮೂವಿಂಗ್ ಕನ್ಸೂಮರ್ ಉತ್ಪನ್ನಗಳ ಮೂಲಕ ಪಾಕಿಸ್ತಾನ, ಅಫ್ಘಾನಿಸ್ತಾನದ ಮಾರುಕಟ್ಟೆಗಳನ್ನೂ  ಪ್ರವೇಶಿಸುವ ಉದ್ದೇಶ ಹೊಂದಿದೆ.

ಈ ಬಗ್ಗೆ ಮಾತನಾಡಿರುವ ಪತಂಜಲಿ ಸಂಸ್ಥೆಯ ಸ್ಥಾಪಕ ಬಾಬಾ ರಾಮ್ ದೇವ್, ಈಗಾಗಲೇ ನೇಪಾಳ ಹಾಗೂ ಬಾಂಗ್ಲಾದೇಶಗಳನ್ನು ಪತಂಜಲಿ ಘಟಕಗಳನ್ನು ಸ್ಥಾಪಿಸಲಾಗಿದ್ದು ನಮ್ಮ ಉತ್ಪನ್ನಗಳು ಮಧ್ಯಪ್ರಾಚ್ಯ ದೇಶಗಳಿಗೂ ರವಾನೆಯಾಗುತ್ತಿದ್ದು ಅಲ್ಲಿಯೂ ಜನಪ್ರಿಯತೆ ಗಳಿಸಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಗಾರ್ಮೆಂಟ್ಸ್ ಕ್ಷೇತ್ರದಲ್ಲೂ ಪತಂಜಲಿ ಬ್ರಾಂಡ್ ನ್ನು ಪರಿಚಯಿಸುವ ಉದ್ದೇಶ ಹೊಂದಲಾಗಿದೆ ಎಂದಿರುವ ಬಾಬಾ ರಾಮ್ ದೇವ್, ಸ್ವದೇಶಿ ಜೀನ್ಸ್ ನ್ನು ಮುಂದಿನ ವರ್ಷದ ವೇಳೆಗೆ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಯುವಕರಿಂದ ಜೀನ್ಸ್ ಗೆ ಹೆಚ್ಚಿನ ಬೇಡಿಕೆ ಇದ್ದು, ಜೀನ್ಸ್ ನ್ನು ಭಾರತೀಕರಣಗೊಳಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ವಿದೇಶಿ ಬ್ರಾಂಡ್ ಗಳಿಗೆ ಪೈಪೋಟಿ ನೀಡಲಿದ್ದೇವೆ ಎಂದು ಬಾಬಾ ರಾಮ್ ದೇವ್ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.