ವಾಣಿಜ್ಯ

ದೇಶದ 5 ನಗರಗಳಲ್ಲಿ ನಿತ್ಯ ತೈಲ ಬೆಲೆ ಪರಿಷ್ಕರಣೆ, ಮೇ 1ರಿಂದ ಜಾರಿ

ಮೇ 1ರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯ ದರವನ್ನಾಧರಿಸಿ ದೇಶದ ಐದು ನಗರಗಳಲ್ಲಿ ಪ್ರತಿ ದಿನ ಪೆಟ್ರೋಲ್ ಮತ್ತು ಡೀಸೆಲ್ ದರ....

ದೇಶದ 5 ನಗರಗಳಲ್ಲಿ ನಿತ್ಯ ತೈಲ ಬೆಲೆ ಪರಿಷ್ಕರಣೆ, ಮೇ 1ರಿಂದ ಜಾರಿ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: ಮೇ 1ರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯ ದರವನ್ನಾಧರಿಸಿ ದೇಶದ ಐದು ನಗರಗಳಲ್ಲಿ ಪ್ರತಿ ದಿನ ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಣೆಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರ್ಧರಿಸಿವೆ ಎಂದು ಬುಧವಾರ ಮೂಲಗಳು ತಿಳಿಸಿವೆ
ದೇಶಾದ್ಯಂತ ನಿತ್ಯ ತೈಲ ಬೆಲೆ ಪರಿಷ್ಕರಣೆಗೆ ಮುಂದಾಗಿರುವ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಈಗ ಪ್ರಾಯೋಗಿಕವಾಗಿ ಐದು ನಗರಗಳಲ್ಲಿ ಮಾತ್ರ ನಿತ್ಯ ತೈಲ ಬೆಲೆ ಪರಿಷ್ಕರಣೆಗೆ ನಿರ್ಧರಿಸಿದ್ದು, ಮುಂದಿನ ಹಂತದಲ್ಲಿ ದೇಶದಾದ್ಯಂತ ಜಾರಿ ಮಾಡಲು ಉದ್ದೇಶಿಸಲಾಗಿದೆ.
ಮೇ 1ರಿಂದ ಪುದುಚೇರಿ, ವೈಝಾಗ್‌, ಉದಯ್‌ಪುರ್, ಜಮ್‌ಷೆಡ್ಪುರ್ ಹಾಗೂ ಚಂಡೀಗಢದಲ್ಲಿ ನಿತ್ಯ ತೈಲ ಬೆಲೆ ಪರಿಷ್ಕರಣೆ ಜಾರಿಗೆ ಬರಲಿದೆ. ಈ ಐದು ನಗರಗಳಲ್ಲಿ ಮೂರು ತೈಲ ಸಂಸ್ಥೆಗಳ 200 ಕೇಂದ್ರಗಳಿದ್ದು , ಹೊಸ ಕ್ರಮದ ಅನುಷ್ಠಾನ ಹಾಗೂ ಆನಂತರದಲ್ಲಿ ಎದುರಾಗುವ ಸಮಸ್ಯೆಗಳನ್ನು ಗಮನಿಸಲಾಗುತ್ತದೆ ಎನ್ನಲಾಗಿದೆ.
ಜಾಗತಿಕ ತೈಲ ಮಾರುಕಟ್ಟೆ ಹಾಗೂ ರೂಪಾಯಿ ಮೌಲ್ಯದ ಏರಿಳಿತವನ್ನು ಗಮನಿಸಿ ಪ್ರಸ್ತುತ ಹದಿನೈದು ದಿನಗಳಿಗೊಮ್ಮೆ ತೈಲ ಬೆಲೆಯಲ್ಲಿ ಪರಿಷ್ಕರಣೆ ಮಾಡಲಾಗುತ್ತಿದೆ.
ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌, ಭಾರತ್‌ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್‌ ಪೆಟ್ರೋಲಿಯಂ ದೇಶದಲ್ಲಿ ಶೇ.90ರಷ್ಟು ತೈಲ ಪೂರೈಕೆ ಮಾಡುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.