ವಾಣಿಜ್ಯ

ಆರ್ಥಿಕ ಅಸಮಾನತೆಯಲ್ಲಿ ಭಾರತಕ್ಕೆ 2ನೇ ಸ್ಥಾನ: ವಿಶ್ವಸಂಸ್ಥೆ ವರದಿ

ಭಾರತದಲ್ಲಿ ಆರ್ಥಿಕ ಅಸಮಾನತೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಕಳವಳ ವ್ಯಕ್ತಪಡಿಸಿದೆ.

ಆರ್ಥಿಕ ಅಸಮಾನತೆಯಲ್ಲಿ ಭಾರತಕ್ಕೆ 2ನೇ ಸ್ಥಾನ: ವಿಶ್ವಸಂಸ್ಥೆ ವರದಿ
ಸಂಗ್ರಹ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಆರ್ಥಿಕ ಅಸಮಾನತೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ ಎಂದು ವಿಶ್ವಸಂಸ್ಥೆಯ ವರದಿಯೊಂದು ಕಳವಳ ವ್ಯಕ್ತಪಡಿಸಿದೆ.

ವಿಶ್ವದ ಆರ್ಥಿಕ ಅಸಮಾನತೆಯ ಪಟ್ಟಿಯಲ್ಲಿ ರಷ್ಯಾ ಮೊದಲ ಸ್ಥಾನದಲ್ಲಿದ್ದು, ನಂತರದ ಸ್ಥಾನ ಭಾರತ ಪಡೆದಿದೆ. ದೇಶದಲ್ಲಿ ಶೇ.53 ರಷ್ಟುಸಂಪತ್ತು ಶೇ.1ರಷ್ಟುಶ್ರೀಮಂತರ ಬಳಿಯೇ ಇದೆ ಎಂದು  ‘ಉತ್ತಮ ವ್ಯವಹಾರ, ಉತ್ತಮ  ವಿಶ್ವ' ವರದಿಯಲ್ಲಿ ವಿಶ್ವಸಂಸ್ಥೆ ಉಲ್ಲೇಖಿಸಿದೆ. ಸಮರ್ಥನೀಯ ವ್ಯಾಪಾರ ಮಾದರಿ ಮೂಲಕ ಭಾರತದಲ್ಲಿ 7.2 ಕೋಟಿ ಉದ್ಯೋಗಗಳನ್ನು 2030ರ ವೇಳೆಗೆ ಸೃಷ್ಟಿಸಬಹುದಾಗಿದೆ ಎಂದೂ ವರದಿ ಹೇಳಿದೆ.

ಭಾರತದಲ್ಲಿ ಆರ್ಥಿಕ ಅಸಮಾನತೆ ಕಡಿಮೆಯಾಗಬೇಕೆಂದರೆ ಕೃಷಿ ಆಧಾರಿತ ಉದ್ದಿಮೆಗಳು ಸ್ಥಾಪನೆಯಾಗಬೇಕು. ಕೃಷಿ ಕ್ಷೇತ್ರವನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಗ್ರಾಮೀಣರಿಗೆ  ಉತ್ತಮ ವೈದ್ಯಕೀಯ ಮೂಲಭೂತ ಸೌಲಭ್ಯ ದೊರೆಯಬೇಕು. ಹೀಗಾದಾಗ ಮಾತ್ರ ಆರ್ಥಿಕ ಅಸಮಾನತೆ ಪ್ರಮಾಣ ತಗ್ಗಲಿದೆ ಎಂದು ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.