ವಾಣಿಜ್ಯ

ಅನುಮತಿ ಇಲ್ಲದೆ 168 ಕೋಟಿ ರು. ಎಲ್ ಪಿಜಿ ಸಬ್ಸಿಡಿ ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ ಗೆ ವರ್ಗಾವಣೆ

37.21 ಲಕ್ಷ ಗ್ರಾಹಕರ ಒಪ್ಪಿಗೆ ಇಲ್ಲದೆಯೇ ಅವರ ಸುಮಾರು 167.7 ಕೋಟಿ ರುಪಾಯಿ ಎಲ್ ಪಿಜಿ ಸಬ್ಸಿಡಿಯನ್ನು...

ಅನುಮತಿ ಇಲ್ಲದೆ 168 ಕೋಟಿ ರು. ಎಲ್ ಪಿಜಿ ಸಬ್ಸಿಡಿ ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ ಗೆ ವರ್ಗಾವಣೆ
ಸಾಂದರ್ಭಿಕ ಚಿತ್ರ
Published On :
ನವದೆಹಲಿ: 37.21 ಲಕ್ಷ ಗ್ರಾಹಕರ ಒಪ್ಪಿಗೆ ಇಲ್ಲದೆಯೇ ಅವರ ಸುಮಾರು 167.7 ಕೋಟಿ ರುಪಾಯಿ ಎಲ್ ಪಿಜಿ ಸಬ್ಸಿಡಿಯನ್ನು ಏರ್ಲೆಟ್ ಪೇಮೆಂಟ್ಸ್ ಬ್ಯಾಂಕ್ ಖ್ಯಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಮಾಧ್ಯಮಕ್ಕೆ ತಿಳಿಸಿದ್ದಾರೆ.
ನವೆಂಬರ್ ತಿಂಗಳ ಅಂತ್ಯದಲ್ಲಿ ಒಟ್ಟು 167.77 ಕೋಟಿ ರುಪಾಯಿ ಎಲ್ ಪಿಜಿ ಸಬ್ಸಿಡಿಯನ್ನು ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ ಗೆ ವರ್ಗಾವಣೆ ಮಾಡಲಾಗಿದೆ. ಒಟ್ಟು 37.21 ಲಕ್ಷ ಗ್ರಾಹಕರ ಖಾತೆಗೆ ಆ ಹಣ ಜಮೆ ಆಗಿದೆ ಎಂದು ಅವರು ಹೇಳಿದ್ದಾರೆ.
ಕಳೆದ ಶನಿವಾರವಷ್ಟೇ ಭಾರತಿ ಏರ್ಟೆಲ್ ಮತ್ತು ಪೇಮೆಂಟ್ಸ್ ಬ್ಯಾಂಕ್ ನ ಆಧಾರ್ ಆಧಾರಿತ ಸಿಮಿ ಪರಿಶೀಲನೆಗೆ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತಾತ್ಕಾಲಿಕ ತಡೆ ನೀಡಿತ್ತು. ಇದರ ಬೆನ್ನಲ್ಲೇ ಈ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ಆಧಾರ್ ಹೇಗೆ ದುರ್ಬುಳಕೆ ಮಾಡಿಕೊಳ್ಳಬಹುದು ಎಂಬುದುಕ್ಕೆ ಸಾಕ್ಷಿಯಾಗಿದೆ.
ತನ್ನ ಗ್ರಾಹಕರಿಗೆ ಮಾಹಿತಿ ನೀಡದೆ ಭಾರತಿ ಏರ್ಟೆಲ್ ಪೇಮೆಂಟ್ಸ್ ಬ್ಯಾಂಕ್ ಖಾತೆಗಳನ್ನು ಆರಂಭಿಸುತ್ತಿದೆ ಎಂಬ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಯುಐಡಿಎಐ ಈ ಕ್ರಮ ತೆಗೆದುಕೊಂಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಇಕೆವೈಸಿ ಹಾಗೂ ಪೇಮೆಂಟ್ಸ್ ಬ್ಯಾಂಕ್ ಗ್ರಾಹಕರ ಕೆವೈಸಿ ಪ್ರಕ್ರಿಯೆಯನ್ನು ಸ್ಥಗತಿಗೊಳಿಸುವಂತೆ ಸೂಚಿಸಿದೆ.
ಆಧಾರ್‌ ಕಾಯ್ದೆ ಉಲ್ಲಂಘನೆ ಆರೋಪದ ಕುರಿತು ಭಾರ್ತಿ ಏರ್‌ಟೆಲ್‌ ವಿರುದ್ಧ ಪ್ರಾಧಿಕಾರ ಕಳೆದ ತಿಂಗಳು ತನಿಖೆಗೆ ಆದೇಶಿಸಿತ್ತು. ಮೊಬೈಲ್‌ ಗ್ರಾಹಕರ ಇ-ಕೆವೈಸಿ ಪ್ರಕ್ರಿಯೆಯನ್ನೇ ಬಳಸಿ ಗ್ರಾಹಕರಿಗೆ ಅರಿವಿಲ್ಲದಂತೆ ಅವರ ಹೆಸರಿಗೆ ಪೇಮೆಂಟ್‌ ಬ್ಯಾಂಕ್‌ ಖಾತೆಗಳನ್ನು ತೆರೆಯುತ್ತಿರುವ ಬಗ್ಗೆ ದೂರು ನೀಡಲಾಗಿತ್ತು. ತಕ್ಷಣದಿಂದಲೇ ಈ ಅಕ್ರಮ ನಿಲ್ಲಿಸದಿದ್ದರೆ ಭಾರೀ ಪ್ರಮಾಣದ ದಂಡ ತೆರಬೇಕಾದೀತು ಎಂದು ಯುಐಡಿಎಐ ಭಾರ್ತಿ ಏರ್‌ಟೆಲ್‌ಗೆ ಎಚ್ಚರಿಕೆ ನೀಡಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.