ಕಳೆದ ಹಣಕಾಸು ವರ್ಷದಲ್ಲಿ ಬ್ಯಾಂಕುಗಳು 17,000 ಕೋಟಿ ರೂ. ಕಳೆದುಕೊಂಡಿವೆ: ಹಣಕಾಸು ಸಚಿವಾಲಯ
ಕಳೆದ ಹಣಕಾಸು ವರ್ಷದಲ್ಲಿ ವಂಚನೆಯಿಂದಾಗಿ ಬ್ಯಾಂಕುಗಳು ಸುಮಾರು 17 ಸಾವಿರ ಕೋಟಿ ರುಪಾಯಿ ಹಣವನ್ನು ಕಳೆದುಕೊಂಡಿವೆ ಎಂದು ಹಣಕಾಸು ಸಚಿವಾಲಯ...

Published On :
ನವದೆಹಲಿ: ಕಳೆದ ಹಣಕಾಸು ವರ್ಷದಲ್ಲಿ ವಂಚನೆಯಿಂದಾಗಿ ಬ್ಯಾಂಕುಗಳು ಸುಮಾರು 17 ಸಾವಿರ ಕೋಟಿ ರುಪಾಯಿ ಹಣವನ್ನು ಕಳೆದುಕೊಂಡಿವೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
ರಿಸರ್ವ್ ಬ್ಯಾಂಕ್ ವರದಿಯ ಪ್ರಕಾರ, ಕಳೆದ ಹಣಕಾಸು ವರ್ಷದಲ್ಲಿ ಬ್ಯಾಂಕುಗಳು ಸುಮಾರು 16.789 ಕೋಟಿ ರುಪಾಯಿಯನ್ನು ಕಳೆದುಕೊಂಡಿದೆ ಎಂದು ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಹಣಕಾಸು ಇಲಾಖೆ ರಾಜ್ಯ ಸಚಿವ ಶಿವಪ್ರತಾಪ್ ಶುಕ್ಲಾ ಅವರು ಹೇಳಿದ್ದಾರೆ.
ಆನ್ ಲೈನ್ ವಂಚನೆಯನ್ನು ತಡೆಯಲು ರಿಸರ್ವ್ ಬ್ಯಾಂಕ್ ಬೇರೆ ಬೇರೆ ಕ್ಷೇತ್ರದ ತಜ್ಞರನ್ನೊಳಗೊಂಡ ಸೈಬರ್ ಸೆಕ್ಯೂರಿಟಿ ಸಮಿತಿಯೊಂದನ್ನು ರಚಿಸಿದೆ ಎಂದು ಶಿವಪ್ರತಾಪ್ ಶುಕ್ಲಾ ಅವರು ಹೇಳಿದ್ದಾರೆ.
ಇದೇ ವೇಳೆ ದರೋಡೆ, ಲೂಟಿ ಮುಂತಾದ ಘಟನೆಗಳಲ್ಲಿ ಬ್ಯಾಂಕುಗಳು 65.3 ಕೋಟಿ ಮೊತ್ತವನ್ನು ಕಳೆದುಕೊಂಡಿವೆ ಎಂದು ಶುಕ್ಲಾ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


