ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಸಿಇಓ ಸ್ಥಾನಕ್ಕೆ ಶಶಿ ಅರೋರಾ ರಾಜೀನಾಮೆ
ಭಾರತಿ ಏರ್ ಟೆಲ್ ಆಧಾರ್-ಸಂಬಂಧಿತ ಇ-ಕೆವೈಸಿ ಪರಿಶೀಲನೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ,......

Published On :
ನವದೆಹಲಿ: ಭಾರತಿ ಏರ್ ಟೆಲ್ ಆಧಾರ್-ಸಂಬಂಧಿತ ಇ-ಕೆವೈಸಿ ಪರಿಶೀಲನೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ, ಏರ್ ಟೆಲ್ ಪೇಮೆಂಟ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶಶಿ ಅರೋರಾ ತನ್ನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಂಸ್ಥೆಯು ಶಶಿ ಅವರನ್ನು ವಜಾ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದು ಅವರು, ಏರ್ ಟೆಲ್ ನ ಬಾಹ್ಯ ವ್ಯವಹಾರಗಳನ್ನು ಮುಂದುವರಿಸಲಿದ್ದಾರೆ ಎಂದು ಸಂಸ್ಥೆ ಸಂಬಂಧಿತ ವರದಿ ತಿಳಿಸಿದೆ.ಇದೇ ಸಮಯದಲ್ಲಿ ಶಶಿ ಅವರ ಕೊಡುಗೆ ಮತ್ತು ಬದ್ಧತೆಯನ್ನು ಏರ್ ಟೆಲ್ ಶ್ಲಾಘಿಸಿದೆ.
ಏರ್ ಟೆಲ್ ಪೇಮೆಂಟ್ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕ ಮತ್ತು ಸಿಇಒ ಆಗಿ ಕಾರ್ಯನಿರ್ವಹಿಸುವ ಮೊದಲು, ಶಶಿ ಏರ್ ಟೆಲ್ ಡಿಟಿಎಚ್ ನ ಸಿಇಒ ಆಗಿಯೂ ಕೆಲಸ ಮಾಡಿದ್ದರು. ಅಲ್ಲದೆ ಅವರು ದೆಹಲಿ ಹಾಗು ಉತ್ತರ ಟೆಲಿಕಾಂ ವಲಯದ ಸಿಇಓ ಆಗಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಆಧಾರ್AadhaarBharti Airtelಭಾರ್ತಿ ಏರ್ ಟೆಲ್e-KYCಇ-ಕೆವೈಸಿAirtel payments bankShashi AroraDTHಏರ್ ಟೆಲ್ ಪೇಮೆಂಟ್ ಬ್ಯಾಂಕ್ಶಶಿ ಅರೋರಾಡಿಟಿಎಚ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


