ಹಣಕಾಸು ನೀತಿ ಪ್ರಕಟಿಸಲಿರುವ ಆರ್ ಬಿಐ, 0.25 ರಷ್ಟು ಬಡ್ಡಿ ದರ ಇಳಿಕೆಯ ನಿರೀಕ್ಷೆ
ಫೆ.8 ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಣಕಾಸು ನೀತಿಯನ್ನು ಪ್ರಕಟಿಸಲಿದ್ದು, ಶೇ 0.25 ರಷ್ಟು ಬಡ್ಡಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ.

Published On :
ಮುಂಬೈ: ಫೆ.8 ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಣಕಾಸು ನೀತಿಯನ್ನು ಪ್ರಕಟಿಸಲಿದ್ದು, ಶೇ 0.25 ರಷ್ಟು ಬಡ್ಡಿ ದರ ಇಳಿಕೆ ಮಾಡುವ ಸಾಧ್ಯತೆ ಇದೆ.
ನೋಟು ನಿಷೇಧದ ಪರಿಣಾಮವನ್ನು ಬೆಳವಣಿಗೆಯ ಸಾಧ್ಯತೆಗಳಿಗೆ ಬಳಕೆ ಮಾಡಿಕೊಳ್ಳಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿಂತನೆ ನಡೆಸಿದ್ದು, ಈ ತಿಂಗಳು ಹಾಗೂ ಮುಂದಿನ ಹಣಕಾಸು ನೀತಿ ಪ್ರಕಟವಾಗಲಿರುವ ಏಪ್ರಿಲ್ ತಿಂಗಳಲ್ಲೂ ಆರ್ ಬಿಐ ಬಡ್ಡಿ ದರ ಕಡಿತಗೊಳಿಸುವ ನಿರೀಕ್ಷೆ ಇದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ.
ಬ್ಯಾಂಕ್ ಆಫ್ ಅಮೇರಿಕಾ ಮೆರಿಲ್ ಲಿಂಚ್ ನೋಟು ನಿಷೆಧದ ಬಗ್ಗೆ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಗೊಳಪಟ್ಟ 2,000 ಜನರ ಪೈಕಿ ಶೇ.60 ರಷ್ಟು ಜನರು ನೋಟು ನಿಷೇಧದಿಂದ ಪರಿಣಾಮ ಎದುರಿಸಿರುವುದಾಗಿ ತಿಳಿಸಿದ್ದಾರೆ ಎಂದು ಹೇಳಿದೆ. ನೋಟು ನಿಷೇಧದಿಂದ ಉಂಟಾದ ಪರಿಣಾಮವನ್ನು ಅಭಿವೃದ್ಧಿಯ ಚಾಲನೆಗೆ ಪೂರಕವಾಗುವಂತೆ ಬಡ್ಡಿ ದರ (ರೆಪೋ ದರ) ಕಡಿಮೆ ಮಾಡಬೇಕೆಂದು ಬ್ಯಾಂಕ್ ಹಾಗೂ ಕೈಗಾರಿಕೆಗಳು ಹೇಳಿದ್ದು, ಹಣಕಾಸು ನೀತಿ ಪ್ರಕಟಿಸಲಿರುವ ಉರ್ಜಿತ್ ಪಟೇಲ್ ರೆಪೋ ದರ ಕಡಿಮೆ ಮಾಡುವ ನಿರೀಕ್ಷೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


