ನಿಷೇಧಿತ ನೋಟುಗಳನ್ನು ಹೊಂದುವುದು ಶಿಕ್ಷಾರ್ಹ: ಕೇಂದ್ರ ಸರ್ಕಾರದ ಅಧಿಸೂಚನೆ
ನಿಷೇಧಿತ 500, 1000 ರೂ ನೋಟುಗಳನ್ನು ಇಟ್ಟುಕೊಳ್ಳುವುದನ್ನು ಶಿಕ್ಷಾರ್ಹ ಅಪರಾಧವನ್ನಾಗಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Published On :
ನವದೆಹಲಿ: ನಿಷೇಧಿತ 500, 1000 ರೂ ನೋಟುಗಳನ್ನು ಇಟ್ಟುಕೊಳ್ಳುವುದನ್ನು ಶಿಕ್ಷಾರ್ಹ ಅಪರಾಧವನ್ನಾಗಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಸರ್ಕಾರದ ಅಧಿಸೂಚನೆಯ ಪ್ರಕಾರ 10 ಕ್ಕಿಂತ ಹೆಚ್ಚು ನಿಷೇಧಿತ ನೋಟುಗಳನ್ನು ಇಟ್ಟುಕೊಂಡಿದ್ದರೆ ಶಿಕ್ಷಾರ್ಹ ಅಪರಾಧವಾಗಲಿದ್ದು, 10,000 ರೂ ವರೆಗೆ ದಂಡ ವಿಧಿಸಬಹುದಾಗಿದೆ. ನಿಗದಿಪಡಿಸಿದ ಬ್ಯಾಂಕ್ ನೋಟು ಕಾಯ್ದೆ 2017 ಮಸೂದೆಯನ್ನು ಕಳೆದ ತಿಂಗಳು ಸಂಸತ್ ನಲ್ಲಿ ಅಂಗೀಕರಿಸಲಾಗಿತ್ತು. ಮಸೂದೆಗೆ ಫೆ.27 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದರು. ಮಸೂದೆಯಲ್ಲಿ 2016 ರ ನ.9 ರಿಂದ ಡಿಸೆಂಬರ್ 30 ವರೆಗೆ ವಿದೇಶದಲ್ಲಿದ್ದ ಭಾರತೀಯರಿಗೆ ತಮ್ಮ ಬಳಿ ಇರುವ ಹಳೆಯ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಮಾ.31 ರ ವರೆಗೆ ಅವಕಾಶ ನೀಡಲಾಗಿದೆ.
ಅಧಿಸೂಚನೆ ಹೊರಡಿಸಲಾಗಿರುವ ಹಿನ್ನೆಲೆಯಲ್ಲಿ ವೈಯಕ್ತಿಕವಾಗಿ 10 ನೋಟುಗಳಿಗಿಂತ ಹೆಚ್ಚು ಹಾಗೂ ಅಧ್ಯಯನ, ಸಂಶೋಧನೆ ಕೆಲಸಗಳಿಗೆ 25 ಕ್ಕಿಂತ ಹೆಚ್ಚು ನೋಟುಗಳನ್ನು ಹೊಂದಿರುವುದು ಶಿಕ್ಷಾರ್ಹ ಅಪರಾಧವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Possession500Banned notes1000 rsPunishableGovernment notificationನಿಷೇಧಿತ ನೋಟು1000 ರೂಶಿಕ್ಷಾರ್ಹ ಅಪರಾಧಕೇಂದ್ರ ಸರ್ಕಾರದ ಅಧಿಸೂಚನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


