ವಾಣಿಜ್ಯ

ನೌಕರರ ಭವಿಷ್ಯ ನಿಧಿ ಸಂಘಟನೆಯಿಂದ ವಿಶೇಷ ನೋಂದಣಿ ಅಭಿಯಾನ

ನೌಕರರ ಭವಿಷ್ಯ ನಿಧಿ ಸಂಘಟನೆಯ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿ ನೌಕರರ ವಿಶೇಷ ನೋಂದಣಿ ಅಭಿಯಾನ-2017...

ನೌಕರರ ಭವಿಷ್ಯ ನಿಧಿ ಸಂಘಟನೆಯಿಂದ ವಿಶೇಷ ನೋಂದಣಿ ಅಭಿಯಾನ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ನೌಕರರ ಭವಿಷ್ಯ ನಿಧಿ ಸಂಘಟನೆಯ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿ ನೌಕರರ ವಿಶೇಷ ನೋಂದಣಿ ಅಭಿಯಾನ-2017 ಅನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ನೌಕರರ ಭವಿಷ್ಯ ನಿಧಿ ಯೋಜನೆಯಿಂದ ಹೊರಗಿರುವ ನೌಕರರನ್ನು ಭವಿಷ್ಯ ನಿಧಿ ವ್ಯಾಪ್ತಿಗೆ ತರಲಾಗುತ್ತಿದೆ.
ಈ ಅಭಿಯಾನವು ಜನವರಿ 1, 2017ರಿಂದ ಮಾರ್ಚ್ 31, 2017ರವೆರೆಗೆ ಚಾಲ್ತಿಯಲ್ಲಿರಲಿದ್ದು, ಬೆಂಗಳೂರು ಸಹಾಯಕ ಭವಿಷ್ಯನಿಧಿ ಆಯುಕ್ತರ ನೇತೃತ್ವದಲ್ಲಿ ವಿಶೇಷ ತಂಡಗಳನ್ನು ರಚಿಸಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.
ಅವಕಾಶವನ್ನು ಎಲ್ಲಾ ಸಂಸ್ಥೆಗಳ ಮಾಲೀಕರು ಸದುಪಯೋಗಪಡಿಸಿಕೊಂಡು, ನೋಂದಣಿಯಾಗದಿರುವ ನೌಕರರನ್ನು ಭವಿಷ್ಯ ನಿಧಿ ವ್ಯಾಪ್ತಿಗೆ ತರುವ ಮೂಲಕ ಏಪ್ರಿಲ್ 1, 2009ರಿಂದ ಡಿಸೆಂಬರ್ 31, 2016ರವರೆಗಿನ ನೌಕರರ ಪಾಲಿನ ಭವಿಷ್ಯ ನಿಧಿ ವಂತಿಕೆಯ ರಿಯಾಯಿತಿ ಪಡೆಯಬೇಕೆಂದು ತಿಳಿಸಲಾಗಿದ್ದು, ಇದಕ್ಕೆ ಮಾರ್ಚ್ 31 ಕೊನೆಯ ದಿನವಾಗಿದೆ.
ಭವಿಷ್ಯದಲ್ಲಿ ಭವಿಷ್ಯ ನಿಧಿಯ ಲಾಭ ಪಡೆಯಲು ಎಲ್ಲಾ ಸದಸ್ಯರು ಮತ್ತು ಪಿಂಚಣಿದಾರರು ತಮ್ಮ ಆಧಾರ ಕಾರ್ಡ್ ಸಂಖ್ಯೆಯನ್ನು ನಮೂದಿಸವುದು/ ಲಿಂಕ್ ಮಾಡವುದು ಕಡ್ಡಾಯಗೊಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನೌಕರರ ಭವಿಷ್ಯ ನಿಧಿ ಸಂಘಟನೆಯ ವೆಬ್ ಸೈಟ್ www.epfindia.gov.in  ಗೆ ಭೇಟಿ ನೀಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.