ಟಾಟಾ ಸನ್ಸ್ ನೂತನ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ನೇಮಕ
ಟಿಸಿಎಸ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ನಟರಾಜ ಚಂದ್ರಶೇಖರನ್ ಅವರು ಟಾಟಾ ಸನ್ಸ್ ನೂತನ...

Published On :
ನವದೆಹಲಿ: ಟಿಸಿಎಸ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ನಟರಾಜ ಚಂದ್ರಶೇಖರನ್ ಅವರು ಟಾಟಾ ಸನ್ಸ್ ನೂತನ ಅಧ್ಯಕ್ಷರಾಗಿ ಗುರುವಾರ ನೇಮಕಗೊಂಡಿದ್ದಾರೆ.
ಕಳೆದ ಅಕ್ಟೋಬರ್ 24ರಂದು ಟಾಟಾ ಸನ್ಸ್ ಅಧ್ಯಕ್ಷ ಹುದ್ದೆಯಿಂದ ಸೈರಸ್ ಮಿಸ್ತ್ರಿ ಅವರನ್ನು ವಜಾಗೊಳಿಸಿದ ಮೂರು ತಿಂಗಳೊಳಗೆ ಅವರ ಸ್ಥಾನಕ್ಕೆ ಚಂದ್ರಶೇಖರನ್ ಅವರನ್ನು ಟಾಟಾ ಸನ್ಸ್ ಆಯ್ಕೆ ಮಾಡಿದೆ. ಅಧ್ಯಕ್ಷ ಸ್ಥಾನದಿಂದ ಮಿಸ್ತ್ರಿ ವಜಾಗೊಂಡ ಮಧ್ಯಂತರ ಅಧ್ಯಕ್ಷರಾಗಿ ಬಂದ ರತನ್ ಟಾಟಾ ಹಾಗೂ ಮಿಸ್ತ್ರಿ ಮಧ್ಯೆ ಕಟು ಆರೋಪ ಪ್ರತ್ಯಾರೋಪಗಳು ನಡೆದಿದ್ದವು.
ಅಕ್ಟೋಬರ್ ನಲ್ಲಿ ಮಿಸ್ತ್ರಿ ವಜಾಗೊಂಡ ನಂತರ ಟಾಟಾ ಸನ್ಸ್ ಆಡಳಿತ ಮಂಡಳಿಯು ಮುಂದಿನ ನಾಲ್ಕು ತಿಂಗಳ ಒಳಗಾಗಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಲುವಾಗಿ ರತನ್ ಟಾಟಾ ಅವರನ್ನೂ ಒಳಗೊಂಡ ಐವರು ಸದಸ್ಯರ ಆಯ್ಕೆ ಸಮಿತಿಯನ್ನು ರಚಿಸಿತ್ತು. ಇಂದು ಮಧ್ಯಾಹ್ನ ನಾಲ್ಕು ಗಂಟೆಗೆ ದಿಢೀರ್ ಸಭೆ ಸೇರಿದ ಈ ಸಮಿತಿ ಚಂದ್ರಶೇಖರನ್ ಅವರನ್ನು ಆಯ್ಕೆ ಮಾಡಿದೆ.
ಇನ್ನು ದೇಶದ ಅತಿದೊಡ್ಡ ಸಾಫ್ಟ್ ವೇರ್ ಸಂಸ್ಥೆ ಟಿಸಿಎಸ್ ಸಿಇಒ ಆಗಿ ರಾಜೇಶ್ ಗೋಫಿನಾಥನ್ ಅವರನ್ನು ನೇಮಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


