ವಾಣಿಜ್ಯ

ಸರಿಯಾಗಿ ನಡೆದುಕೊಳ್ಳಿ: ಅಮೆಜಾನ್ ಗೆ ಶಕ್ತಿಕಾಂತ್ ದಾಸ್ ಎಚ್ಚರಿಕೆ

ಭಾರತದ ರಾಷ್ಟ್ರಧ್ವಜ ಚಿತ್ರ ಹೊಂದಿರುವ ಡೋರ್​ಮ್ಯಾಟ್ ಮತ್ತು ರಾಷ್ಟ್ರಪಿತ ಮಹಾತ್ಮಗಾಂಧಿ ಇರುವ ಚಪ್ಪಲಿಗಳನ್ನು ಮಾರಾಟಕ್ಕಿಟ್ಟಿದ್ದ ಇ-ಕಾಮರ್ಸ್ ಸಂಸ್ಥೆ ಅಮೆಜಾನ್...

ಸರಿಯಾಗಿ ನಡೆದುಕೊಳ್ಳಿ: ಅಮೆಜಾನ್ ಗೆ ಶಕ್ತಿಕಾಂತ್ ದಾಸ್ ಎಚ್ಚರಿಕೆ
ಅಮೆಜಾನ್-ಶಕ್ತಿಕಾಂತ್ ದಾಸ್
Published On :

ನವದೆಹಲಿ: ಭಾರತದ ರಾಷ್ಟ್ರಧ್ವಜ ಚಿತ್ರ ಹೊಂದಿರುವ ಡೋರ್​ಮ್ಯಾಟ್ ಮತ್ತು ರಾಷ್ಟ್ರಪಿತ ಮಹಾತ್ಮಗಾಂಧಿ ಇರುವ ಚಪ್ಪಲಿಗಳನ್ನು ಮಾರಾಟಕ್ಕಿಟ್ಟಿದ್ದ ಇ-ಕಾಮರ್ಸ್ ಸಂಸ್ಥೆ ಅಮೆಜಾನ್ ಗೆ ಆರ್ಥಿಕ ವ್ಯವಹಾರ ಸಚಿವಾಲಯದ ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಕಟುವಾದ ಎಚ್ಚರಿಕೆ ನೀಡಿದ್ದಾರೆ.

ಭಾರತದ ಲಾಂಛನ ಮತ್ತು ಚಿಹ್ನೆಗಳ ಜತೆ ಚೆಲ್ಲಾಟವಾಡುವುದನ್ನು ಇನ್ನಾದರೂ ಬಿಡಿ. ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿದರೇ ಗಂಡಾಂತರವನ್ನು ನೀವೇ ಆಹ್ವಾನಿಸಿಕೊಂಡಂತೆ ಎಂದು ಶಕ್ತಿಕಾಂತ್ ದಾಸ್ ಎಚ್ಚರಿಕೆ ನೀಡಿದ್ದಾರೆ.

ಭಾರತದ ರಾಷ್ಟ್ರಧ್ವಜ ಚಿತ್ರ ಹೊಂದಿರುವ ಡೋರ್​ಮ್ಯಾಟ್ ಮತ್ತು ರಾಷ್ಟ್ರಪಿತ ಮಹಾತ್ಮಗಾಂಧಿ ಇರುವ ಚಪ್ಪಲಿಗಳನ್ನು ಮಾರಾಟಕ್ಕಿಟ್ಟಿದ್ದ ಇ-ಕಾಮರ್ಸ್ ಸಂಸ್ಥೆ ಅಮೆಜಾನ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಮೊದಲಿಗೆ ರಾಷ್ಟ್ರಧ್ವಜ ಚಿತ್ರವಿರುವ ಡೋರ್ ಮ್ಯಾಟ್ ಮಾರಾಟಕ್ಕಿಟ್ಟಿದ್ದಕ್ಕೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಎಚ್ಚರಿಕೆ ನೀಡಿದ್ದರು. ಇದರಿಂದ ಎಚ್ಚೆತ್ತ ಅಮೆಜಾನ್ ಕ್ಷಮೆಯಾಚಿಸಿತ್ತು. ಇದಾದ ಎರಡು ದಿನಗಳ ಬಳಿಕ ರಾಷ್ಟ್ರಪಿತ ಮಹಾತ್ಮಗಾಂಧಿ ಇರುವ ಚಪ್ಪಲಿಗಳನ್ನು ಮಾರಾಟಕ್ಕಿಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.