ಎನ್ಇಎಫ್ ಟಿ, ಆರ್ ಟಿಜಿಎಸ್ ಶುಲ್ಕ ಶೇ.75 ರಷ್ಟು ಕಡಿತಗೊಳಿಸಿದ ಎಸ್ ಬಿಐ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ರಾಷ್ಟ್ರೀಯ ಎಲೆಕ್ಟ್ರಾನಿಕ್ ಹಣ ವರ್ಗಾವಣೆ (ಎನ್ ಇಎಫ್ ಟಿ) ಹಾಗೂ ರಿಯಲ್ ಟೈಮ್ ಗ್ರಾಸ್ ಸೆಟ್ಲ್ಮೆಂಟ್(ಆರ್ ಟಿಜಿಎಸ್) ವಹಿವಾಟುಗಳ ಶುಲ್ಕವನ್ನು ಶೇ.75 ರಷ್ಟು ಕಡಿಮೆಗೊಳಿಸಿದೆ.

Published On :
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ರಾಷ್ಟ್ರೀಯ ಎಲೆಕ್ಟ್ರಾನಿಕ್ ಹಣ ವರ್ಗಾವಣೆ (ಎನ್ ಇಎಫ್ ಟಿ) ಹಾಗೂ ರಿಯಲ್ ಟೈಮ್ ಗ್ರಾಸ್ ಸೆಟ್ಲ್ಮೆಂಟ್(ಆರ್ ಟಿಜಿಎಸ್) ವಹಿವಾಟುಗಳ ಶುಲ್ಕವನ್ನು ಶೇ.75 ರಷ್ಟು ಕಡಿಮೆಗೊಳಿಸಿದೆ.
ಜು.15 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೇಳಿಕೆ ಬಿಡುಗಡೆ ಮಾಡಿದೆ. ಇಂಟರ್ ನೆಟ್ ಬ್ಯಾಂಕಿಂಗ್ (ಐಎನ್ ಬಿ) ಹಾಗೂ ಮೊಬೈಲ್ ಬ್ಯಾಂಕಿಂಗ್ (ಎಂಬಿ) ಮೂಲಕ ನಡೆಸುವ ವಹಿವಾಟುಗಳಿಗೆ ಪರಿಷ್ಕೃತ ದರ ಅನ್ವಯವಾಗಲಿದ್ದು, 1,000 ರೂ ವರೆಗೆ ತಕ್ಷಣದ ಪಾವತಿ ಸೇವೆಗಳಿಗೆ ವಿಧಿಸಲಾಗುತ್ತಿದ್ದ ಶುಲ್ಕವನ್ನು ರದ್ದುಗೊಳಿಸಲಾಗಿದ್ದು, ಈ ಸೌಲಭ್ಯ ಆ.1 ರಿಂದ ಜಾರಿಗೆ ಬರಲಿದೆ ಎಂದು ಎಸ್ ಬಿಐ ಹೇಳಿದೆ.
ಭಾರತ ಸರ್ಕಾರ ಡಿಜಿಟಲ್ ಎಕಾನಮಿಗೆ ಹೆಚ್ಚಿನ ಒತ್ತು ನೀಡುತ್ತಿರುವ ಹಿನ್ನೆಲೆಯಲ್ಲಿ ಇಂಟರ್ ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಗೆ ಉತ್ತೇಜನ ನೀಡುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ ಬಿಐ ಎಂಡಿ ರಜನೀಷ್ ಕುಮಾರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


