ಮಾರ್ಚ್ 25 ರಿಂದ ಏಪ್ರಿಲ್ 1 ರವರೆಗೆ ಬ್ಯಾಂಕ್ ಗಳಿಗೆ ಯಾವುದೇ ರಜೆ ಇಲ್ಲ
ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್'ಗಳು ಶನಿವಾರ ಹಾಗೂ ಭಾನುವಾರ ಒಳಗೊಂಡಂತೆ 8 ದಿನಗಳ ಕಾಲ ಕಾರ್ಯ ನಿರ್ವಹಿಸಲಿವೆ ಎಂದು ಆರ್'ಬಿಐ ಪ್ರಕಟಣೆ...

ನವದೆಹಲಿ: ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್'ಗಳು ಇದೇ ಶನಿವಾರ ಹಾಗೂ ಭಾನುವಾರ ಒಳಗೊಂಡಂತೆ 8 ದಿನಗಳ ಕಾಲ ಕಾರ್ಯ ನಿರ್ವಹಿಸಲಿವೆ ಎಂದು ಆರ್'ಬಿಐ ಪ್ರಕಟಣೆ ತಿಳಿಸಿದೆ
ಸರ್ಕಾರದ ಸ್ವೀಕೃತಿ ಹಾಗೂ ತೆರಿಗೆ ಸಂಗ್ರಹದ ವಹಿವಾಟಿನ ಹಿನ್ನೆಲೆಯಲ್ಲಿ ಮಾ.25ರಿಂದ ಏಪ್ರಿಲ್ 1ರವರೆಗೆ ತೆರೆದಿರುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಆದೇಶ ನೀಡಿದೆ. ಈ ಅವಧಿಯಲ್ಲಿ ಆರ್ ಬಿಐ ಕೂಡಾ ಕಾರ್ಯನಿರ್ವಹಿಸಲಿದೆ ಎಂದು ಹೇಳಿದೆ.
ಸರ್ಕಾರಿ ಸ್ವೀಕೃತಿ ಮತ್ತು ಪಾವತಿ ಸಂಗ್ರಹದ ವಹಿವಾಟಿನ ಹಿನ್ನೆಲೆಯಲ್ಲಿ ಮಾರ್ಚ್ ತಿಂಗಳ 4ನೇ ಹಾಗೂ ಭಾನುವಾರ, ಎಲ್ಲಾ ರಜೆ ಸೇರಿದಂತೆ) ಮಾ.25ರಿಂದ ಏ.1ರವರೆಗೆ ಬ್ಯಾಂಕ್ ಗಳು ಕಾರ್ಯನಿರ್ವಹಿಸಬೇಕೆಂದು ಆರ್ ಬಿಐ ಶುಕ್ರವಾರ ಸಂಜೆ ವೆಬ್ ಸೈಟ್ ನಲ್ಲಿ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಆರ್ ಬಿಐ ಸೂಚನೆಯಂತೆ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್ ಗಳು ರಜಾ ದಿನಗಳು ಸೇರಿದಂತೆ ಮಾರ್ಚ್ 25ರಿಂದ ಏ.1ರವರೆಗೆ 8 ದಿನಗಳ ಕಾಲ ಕಾರ್ಯನಿರ್ವಹಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


