ಶೀಘ್ರದಲ್ಲೇ ಐಟಿ ಉದ್ಯೋಗಿಗಳ ಅಸೋಸಿಯೇಷನ್ ಭೇಟಿ ಮಾಡಲಿರುವ ಸಚಿವ ಪ್ರಿಯಾಂಕ್ ಖರ್ಗೆ
ನೌಕರಿಯಿಂದ ವಜಾಗೊಳಿಸುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಚಿವ ಪ್ರಿಯಾಂಕ್ ಖರ್ಗೆ ಶೀಘ್ರವೇ ಐಟಿ ಉದ್ಯೋಗಿಗಳ ಸಂಘವನ್ನು ಭೇಟಿ ...

Published On :
ಬೆಂಗಳೂರು: ನೌಕರಿಯಿಂದ ವಜಾಗೊಳಿಸುವುದು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಚಿವ ಪ್ರಿಯಾಂಕ್ ಖರ್ಗೆ ಶೀಘ್ರವೇ ಐಟಿ ಉದ್ಯೋಗಿಗಳ ಸಂಘವನ್ನು ಭೇಟಿ ಮಾಡಲಿದ್ದಾರೆ.
ಸಮಸ್ಯೆಗಳ ಬಗ್ಗೆ ಚರ್ಚಿಸಲು ಶೀಘ್ರವೇ ಭೇಟಿ ಮಾಡುವುದಾಗಿ ರಾಜ್ಯ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅಖಿಲ ಭಾರತ ಐಟಿ ಉದ್ಯೋಗಿಗಳ ಸಂಘಕ್ಕೆ ಹೇಳಿದ್ದಾರೆ.ಉದ್ಯೋಗಿಗಳ ಸಮಸ್ಯೆಯನ್ನು ಆಲಿಸಿ, ಸಾಧ್ಯವಾದಷ್ಟು ಮಟ್ಟಿಗೆ ಅವುಗಳನ್ನು ಬಗೆಹರಿಸುಪವುದಾಗಿ ಹೇಳಿದ್ದಾರೆ.
ಈ ಮೊದಲು ತಮ್ಮ ಸಮಸ್ಯೆಗಳ ಬಗ್ಗೆ ಕಾರ್ಮಿಕ ಇಲಾಖೆಗೆ ದೂರು ಸಲ್ಲಿಸುವಂತೆ ಸಚಿವರು ಹೇಳಿದ್ದರು. ಆದರೆ ಇತ್ತೀಚೆಗೆ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಸರ್ಕಾರ ಐಟಿ ಉದ್ಯೋಗಿಗಳ ಸಮಸ್ಯೆ ಬಗೆಹರಿಸಲು ಸಿದ್ಧವಿದ್ಧು ವಜಾಗೊಂಡ ನೌಕರರ ಸಹಾಯಕ್ಕಾಗಿ ಕಾನೂನು ಸಲಹೆ ಪಡೆಯುವುದಾಗಿ ಹೇಳಿದ್ದಾರೆ.
ಅಖಿಲ ಭಾರತ ಐಟಿ ಉದ್ಯೋಗಿಗಳ ಸಂಘದ ಅಧ್ಯಕ್ಷ ಸೈಯ್ಯದ್ ಮುಕ್ಯುಮುದ್ದೀನ್ ಪ್ರಿಯಾಂಕ್ ಖರ್ಗೆ ಅವರಿಗೆ ಈ ಮೇಲ್ ಮಾಡಿ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಶೀಘ್ರವೇ ಸಭೆ ಏರ್ಪಡಿಸಬೇಕೆಂದು ಮನವಿ ಮಾಡಿದ್ದರು.
ವಿವಿಧ ರಾಜ್ಯಗಳ ಸರ್ಕಾರಗಳಿಗೆ ಮನವಿ ಸಲ್ಲಿಸಿದ್ದ ಸೆಯ್ಯದ್ , ಉದ್ಯೋಗಿಗಳ ಕಾನೂನು ಬಾಹಿರ ವಜಾ ಸಂಬಂಧ ಬೆಂಗಳೂರಿನ ಕಾರ್ಮಿಕ ಆಯೋಗಕ್ಕೆ ದೂರು ನೀಡಿದ್ದರು. ಉದ್ಯೋಗಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದರು ವಜಾ ಮಾಡಲಾಗುತ್ತಿದೆ ಎಂದು ದೂರು ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


