ಸರ್ಕಾರ ಬಂಡವಾಳದಾರರ ಸಾಲ ಮನ್ನ ಮಾಡಿಲ್ಲ: ಅರುಣ್ ಜೆಟ್ಲಿ
ಸರ್ಕಾರ ಬಂಡವಾಳದಾರರ ಸಾಲ ಮನ್ನಾ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.

Published On :
ನವದೆಹಲಿ: ಸರ್ಕಾರ ಬಂಡವಾಳದಾರರ ಸಾಲ ಮನ್ನಾ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.
ಬಂಡವಾಳದಾರರ ಸಾಲವನ್ನು ಮನ್ನಾ ಮಾಡಲಾಗಿದೆ ಎಂಬ ವದಂತಿಗಳ ಬಗ್ಗೆ ಅರುಣ್ ಜೇಟ್ಲಿ ತಮ್ಮ ಬ್ಲಾಗ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಈಗ ಎನ್ ಪಿಎ ಆಗಿರುವ ಲೋನ್ ಗಳನ್ನು 2008-2014 ರ ಅವಧಿಯಲ್ಲಿ ಯಾರ ಆದೇಶದಂತೆ ಮಂಜೂರು ಮಾಡಲಾಗಿತ್ತು ಎಂದು ಅರುಣ್ ಜೇಟ್ಲಿ ಪ್ರಶ್ನಿಸಿದ್ದಾರೆ.
ಯಾರ ಆಣತಿ, ಒತ್ತಡಕ್ಕೆ ಮಣಿದು 2008-2014 ರ ಅವಧಿಯಲ್ಲಿ ಬಂಡವಾಳದಾರರಿಗೆ ಬೃಹತ್ ಪ್ರಮಾಣದಲ್ಲಿ ಸಾಲ ಮಂಜೂರು ಮಾಡಲಾಗಿದೆ ಎಂಬುದನ್ನು ಈಗ ವದಂತಿ ಹಬ್ಬಿಸುತ್ತಿರುವವರನ್ನು ಸಾರ್ವಜನಿಕರು ಪ್ರಶ್ನಿಸಬೇಕಿದೆ ಎಂದು ಜೇಟ್ಲಿ ಅಭಿಪ್ರಾಯಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಸಾಲ ಪಡೆದವರು ವಾಪಸ್ ನೀಡುವುದು ತಡವಾದಾಗ ಹಿಂದಿನ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂಬುದನ್ನೂ ಸಾರ್ವಜನಿಕರು ಪ್ರಶ್ನಿಸಬೇಕಿದೆ ಎಂದು ಜೇಟ್ಲಿ ಹ್ಜೇಳಿದ್ದು, ಎನ್ ಡಿಎ ಸರ್ಕಾರ ಬಂಡವಾಳದಾರರ ಸಾಲ ಮನ್ನಾ ಮಾಡಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


