ವಾಣಿಜ್ಯ

ಮುಂದಿನ 7 ವರ್ಷಗಳಲ್ಲಿ ಭಾರತದ ಜಿಡಿಪಿ ದುಪ್ಪಟ್ಟಾಗಲಿದೆ: ಮುಖೇಶ್ ಅಂಬಾನಿ ಭವಿಷ್ಯ

ಮುಂದಿನ 7 ವರ್ಷಗಳಲ್ಲಿ ಭಾರತದ ಜಿಡಿಪಿ 5 ಟ್ರಿಲಿಯನ್ ಡಾಲರ್ ನಷ್ಟಾಗಲಿದ್ದು, 2030 ರ ವೇಳೆಗೆ 10 ಟ್ರಿಲಿಯನ್ ಡಾಲರ್ ನಷ್ಟಾಗಲಿದೆ ಎಂದು ಏಷ್ಯಾದ 2 ನೇ ಶ್ರೀಮಂತ ಮುಖೇಶ್ ಅಂಬಾನಿ ಭವಿಷ್ಯ

ಮುಂದಿನ 7 ವರ್ಷಗಳಲ್ಲಿ ಭಾರತದ ಜಿಡಿಪಿ ದುಪ್ಪಟ್ಟಾಗಲಿದೆ: ಮುಖೇಶ್ ಅಂಬಾನಿ ಭವಿಷ್ಯ
ಮುಖೇಶ್ ಅಂಬಾನಿ
Published On :
ನವದೆಹಲಿ: ಮುಂದಿನ 7 ವರ್ಷಗಳಲ್ಲಿ ಭಾರತದ ಜಿಡಿಪಿ 5 ಟ್ರಿಲಿಯನ್ ಡಾಲರ್ ನಷ್ಟಾಗಲಿದ್ದು, 2030 ರ ವೇಳೆಗೆ 10 ಟ್ರಿಲಿಯನ್ ಡಾಲರ್ ನಷ್ಟಾಗಲಿದೆ ಎಂದು ಏಷ್ಯಾದ 2 ನೇ ಶ್ರೀಮಂತ ಮುಖೇಶ್ ಅಂಬಾನಿ ಭವಿಷ್ಯ ನುಡಿದಿದ್ದಾರೆ. 
ಹೆಚ್ ಟಿ ಲೀಡರ್ಶಿಪ್ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿರುವ ರಿಲಾಯನ್ಸ್ ಇಂಡಸ್ಟ್ರೀಸ್ ನ ಅಧ್ಯಕ್ಷ ಹಾಗೂ ಎಂಡಿ ಮುಖೇಶ್ ಅಂಬಾನಿ, ಭಾರತದ ಜಿಡಿಪಿ 7 ವರ್ಷಗಳಲ್ಲಿ ದುಪ್ಪಟ್ಟಾಗಲಿದ್ದು, 21 ನೇ ಶತಮಾನದ ಮಧ್ಯಭಾಗದಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿದೆ ಎಂದು ಅಂಬಾನಿ ಹೇಳಿದ್ದಾರೆ. 
"500 ಬಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದ ಭಾರತ 20 ವರ್ಷಗಳಲ್ಲಿ 5 ಟ್ರಿಲಿಯನ್ ನಷ್ಟಾಗಲಿದೆ ಎಂದು 2004 ರಲ್ಲಿ ಹೇಳಿದ್ದೆ. ಈಗ ಅದು ಬಹುತೇಕ ನಿಜವಾಗುತ್ತಿದೆ. 2024 ಕ್ಕೂ ಮುನ್ನವೇ 5 ಟ್ರಿಲಿಯನ್ ಡಾಲರ್ ಜಿಡಿಪಿಯ ಗುರಿ ಮುಟ್ಟಲಿದ್ದೇವೆ" ಮುಂದಿನ 10 ವರ್ಷಗಳಲ್ಲಿ ಭಾರತ 7 ಟ್ರಿಲಿಯನ್ ಆರ್ಥಿಕತೆಯಾಗುವ ಮೂಲಕ ವಿಶ್ವದ 3 ನೇ ಅತಿ ದೊಡ್ಡ ಆರ್ಥಿಕತೆಯಾಗಿರಲಿದೆ ಎಂದು ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ. 
2030 ರ ವೇಳೆಗೆ ಭಾರತದ ಆರ್ಥಿಕತೆ 10 ಟ್ರಿಲಿಯನ್ ಮೈಲಿಗಲ್ಲು ದಾಟಲಿದೆ. ಅಮೆರಿಕ ಹಾಗೂ ಚೀನಾವನ್ನು ಹಿಂದಿಕ್ಕಿ ಈ ಶತಮಾನದ ಮಧ್ಯಭಾಗದಲ್ಲಿಯೇ ಭಾರತ ವಿಶ್ವದ ಅತ್ಯಂತ ಸಂಪತ್ಭರಿತವಾದ ರಾಷ್ಟ್ರವಾಗಲಿದೆ ಎಂದು ಅಂಬಾನಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.