ಟೆಲಿಕಾಂ ಕ್ಷೇತ್ರದ ಮೇಲೆ ಹೆಚ್ಚಿನ ಆರ್ಥಿಕ ಹೊರೆ: 1.5 ಲಕ್ಷ ಉದ್ಯೋಗಗಳಿಗೆ ಕುತ್ತು!
ಟೆಲಿಕಾಂ ಕ್ಷೇತ್ರದ ಮೇಲೆ ಆರ್ಥಿಕ ಹೊರೆ ಹೆಚ್ಚುತ್ತಿದ್ದು, ಕಾರ್ಪೊರೇಟ್ ಡೌನ್ ಸೈಸಿಂಗ್(ಉದ್ಯೋಗಗಳ ಕಡಿತ) ದಿಂದಾಗಿ 1.5 ಲಕ್ಷ ಉದ್ಯೋಗಗಳಿಗೆ ಕುತ್ತು ಎದುರಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

Published On :
ಮುಂಬೈ: ಟೆಲಿಕಾಂ ಕ್ಷೇತ್ರದ ಮೇಲೆ ಆರ್ಥಿಕ ಹೊರೆ ಹೆಚ್ಚುತ್ತಿದ್ದು, ಕಾರ್ಪೊರೇಟ್ ಡೌನ್ ಸೈಸಿಂಗ್(ಉದ್ಯೋಗಗಳ ಕಡಿತ) ದಿಂದಾಗಿ 1.5 ಲಕ್ಷ ಉದ್ಯೋಗಗಳಿಗೆ ಕುತ್ತು ಎದುರಾಗುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೈಪೋಟಿಯಿಂದಾಗಿ ಟೆಲಿಕಾಂ ಕಂಪನಿಗಳು ಗ್ರಾಹಕರನ್ನು ಉಳಿಸಿಕೊಳ್ಳಲು ಘೋಷಣೆ ಮಾಡುತ್ತಿರುವ ಹೊಸ ಹೊಸ ಆಕರ್ಷಕ ಕೊಡುಗೆಗಳಿಂದಾಗಿ ಟೆಲಿಕಾಂ ಕ್ಷೇತ್ರಕ್ಕೆ ಒಂದು ಅಂದಾಜಿನ ಪ್ರಕಾರ ಸುಮಾರು 8 ಲಕ್ಷ ಕೋಟಿಯಷ್ಟು ಸಾಲ ಇದ್ದು, ನಷ್ಟ ಉಂಟಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಟೆಲಿಕಾಂ ಕ್ಷೇತ್ರಕ್ಕೆ ಹೆಚ್ಚಿನ ಹೊರೆಯಾಗದಂತೆ ಸಹಕಾರಿಯಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಬ್ಯಾಂಕ್ ಗಳಿಗೆ ರಿಸರ್ವ್ ಬ್ಯಾಂಕ್ ಸಹ ಸೂಚನೆ ನೀಡಿದೆ. ಅಷ್ಟೇ ಅಲ್ಲದೇ ಇತ್ತೀಚೆಗೆ ನಡೆದ ಮೊಬೈಲ್ ಕಾಂಗ್ರೆಸ್ ನಲ್ಲಿ ಭಾಗವಹಿಸಿದ್ದ ಸಂವಹನ ಖಾತೆ ಸಚಿವ ಮನೋಜ್ ಸಿನ್ಹಾ " ಟೆಲಿಕಾಂ ಕ್ಷೇತ್ರಕ್ಕೆ ಉಂಟಾಗುತ್ತಿರುವ ಹೊರೆಯ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಈ ಹಿಂದೆ ಸರ್ಕಾರ ಮಧ್ಯಪ್ರವೇಶ ಮಾಡಿತ್ತು. ಅಗತ್ಯವಿದ್ದರೆ ಮತ್ತೊಮ್ಮೆ ಮಧ್ಯಪ್ರವೇಶ ಮಾಡುತ್ತದೆ ಎಂದು ಹೇಳಿದ್ದರು.
ಟೆಲಿಕಾಂ ಇಂಡಸ್ಟ್ರಿ ಪ್ರಕಾರ ಟೆಲಿಕಾಂ ಸಂಸ್ಥೆಗಳು ಅತಿ ಹೆಚ್ಚು ವೆಚ್ಚ ಕಡಿವಾಣಕ್ಕಾಗಿ ಡೌನ್ ಸೈಸಿಂಗ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳದೇ ಬೇರೆ ಮಾರ್ಗವಿಲ್ಲ ಎಂದು ವಿಶ್ಲೇಷಿಸಲಾಗುತ್ತಿದ್ದು, ಟೆಲಿಕಾಂ ಸಂಸ್ಥೆಗಳು ವಿಲೀನಗೊಳ್ಳುತ್ತಿರುವುದರಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಗಳಿಗೆ ಕತ್ತರಿ ಬೀಳುತ್ತಿದೆ. ವೋಡಾಫೋನ್-ಐಡಿಯಾ ವಿಲೀನ ಪ್ರಕ್ರಿಯೆಯಿಂದಾಗಿ 1,800 ಉದ್ಯೋಗಗಳಿಗೆ ಕತ್ತರಿ ಹಾಕಲಾಗುತ್ತಿದ್ದು, ಮಾರ್ಚ್ ವೇಳೆಗೆ 5,000-6,000 ಉದ್ಯೋಗಗಳಿಗೆ ಕತ್ತರಿ ಬೀಳಲಿದೆ, ಇತ್ತ ವೋಡಾಫೋನ್ ಸಹ 1,400 ನೌಕರರನ್ನು ಕೆಲಸದಿಂದ ತೆಗೆದುಹಾಕುತ್ತಿದೆ. ಏರ್ ಟೆಲ್ 1,500 ನೌಕರರನ್ನು, ರಿಲಾಯನ್ಸ್ 1,200 ನೌಕರರನ್ನು ಉದ್ಯೋಗದಿಂದ ತೆಗೆದುಹಾಕುತ್ತಿದ್ದು ಒಟ್ಟಾರೆ 1.5 ಲಕ್ಷ ಉದ್ಯೋಗಗಳಿಗೆ ಕುತ್ತು ಎದುರಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


