ಗುಜರಾತ್: ಶೇ.4 ರಷ್ಟು ವ್ಯಾಟ್ ಕಡಿತ, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಇಳಿಕೆ
ಭಾರತೀಯ ಜನತಾ ಪಕ್ಷದ ಆಡಳಿತವಿರುವ ಗುಜರಾತಿನಲ್ಲಿ ಇಂಧನ ಬೆಲೆಗಳ ಮೇಲೆ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತಗೊಳಿಸಲು ನಿರ್ಧರಿಸಲಾಗಿದೆ.
Published On :
ಗಾಂಧಿನಗರ: ಭಾರತೀಯ ಜನತಾ ಪಕ್ಷದ ಆಡಳಿತವಿರುವ ಗುಜರಾತಿನಲ್ಲಿ ಇಂಧನ ಬೆಲೆಗಳ ಮೇಲೆ ಮೌಲ್ಯವರ್ಧಿತ ತೆರಿಗೆಯನ್ನು (ವ್ಯಾಟ್) ಕಡಿತಗೊಳಿಸಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ವಿಜಯ್ ರೂಪಾನಿ ಮಾದ್ಯಮದೊಡನೆ ಮಾತನಾಡಿ, "ನಾವು ಇಂಧನದ ಮೇಲೆ ಮೌಲ್ಯವರ್ಧಿತ ತೆರಿಗೆಯನ್ನು ಶೇ.4 ರಷ್ಟು ಕಡಿತಗೊಳಿಸಲು ನಿರ್ಧರಿಸಿದ್ದೇವೆ. ಇದರಿಂದಾಗಿ ಪೆಟ್ರೋಲ್ ದರವು 2.93 ರೂ. ಮತ್ತು ಡೀಸೆಲ್ 2.72 ರೂ.ಇಳಿಕೆ ಆಗಲಿದೆ." ಎಂದರು.
ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಇಂಧನದ ಮೇಲೆ ವ್ಯಾಟ್ ಅನ್ನು ಕಡಿತಗೊಳಿಸುವ ನಿರ್ಧಾರ ಮಾಡಲಾಗಿದೆ, ಮುಂಬರುವ ಎರಡು ಅಥವಾ ಮೂರು ದಿನಗಳಲ್ಲಿ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ರೂಪಾನಿ ಹೇಳಿದ್ದಾರೆ.
ಕೇಂದ್ರ ಸರಕಾರವು ಕಳೆದ ವಾರ, ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವುದಾಗಿ ಘೋಷಿಸಿತ್ತು. ಈ ಕ್ರಮವು "ಕಚ್ಚಾ ಪೆಟ್ರೋಲಿಯಂ ತೈಲದ ಹೆಚ್ಚುತ್ತಿರುವ ಅಂತರರಾಷ್ಟ್ರೀಯ ಬೆಲೆ ಮತ್ತು ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಮಾರಾಟದ ಬೆಲೆಯ ಮೇಲೆ ಪ್ರಭಾವ ಬೀರಲಿದೆ ಎಂದು ಹೇಳಿದರು.
ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ನ್ನು ಶೇ. 5 ರಷ್ಟು ಕಡಿತಗೊಳಿಸಲು ರಾಜ್ಯಗಳಿಗೆ ಸೂಚಿಸಿದ್ದರು.
"ರಾಜ್ಯಗಳು ಸಹ ಕೇಂದ್ರದಂತೆಯೇ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಗ್ರಾಹಕರ ಹಿತಾಸಕ್ತಿಗೆ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು" ಎಂದು ಪ್ರಧಾನ್ ಹೇಳಿದರು.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ "ಈ ಕುರಿತು ನಮ್ಮ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ದೀಪಾವಳಿಯ ಸಂಭ್ರಮಕ್ಕಾಗಿ ಕಾಯಬೇಕಿದೆ" ಎಂದರು
ಇಷ್ಟಾಗಿಯೂ ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿ ಸರ್ಕಾರವಿರುವ ಕೇರಳವು ಕೇಂದ್ರದ ಸೂಚನೆಗೆ ವಿರೋಧ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Gujaratಗುಜರಾತ್VATವ್ಯಾಟ್fuel prices in Gujaratfuel price reductionಗುಜರಾತಿನಲ್ಲಿ ಇಂಧನ ಬೆಲೆಇಂಧನ ಬೆಲೆ ಇಳಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

