ಪೆಪ್ಸಿಕೋ ಇಂಡಿಯಾ ಸಿಇಒ ಶಿವಕುಮಾರ್ ರಾಜಿನಾಮೆ, ಆದಿತ್ಯ ಬಿರ್ಲಾ ಗ್ರೂಪ್ ಸೇರ್ಪಡೆ
ಸುಮಾರು ನಾಲ್ಕು ವರ್ಷಗಳ ನಂತರ ಪೆಪ್ಸಿಕೋ ಇಂಡಿಯಾ ಅಧ್ಯಕ್ಷ ಮತ್ತು ಸಿಇಒ ಸ್ಥಾನಕ್ಕೆ ಡಿ ಶಿವಕುಮಾರ್ ಅವರು ಮಂಗಳವಾರ ರಾಜಿನಾಮೆ ನೀಡಿದ್ದು, ಆದಿತ್ಯ ...

Published On :
ನವದೆಹಲಿ: ಸುಮಾರು ನಾಲ್ಕು ವರ್ಷಗಳ ನಂತರ ಪೆಪ್ಸಿಕೋ ಇಂಡಿಯಾ ಅಧ್ಯಕ್ಷ ಮತ್ತು ಸಿಇಒ ಸ್ಥಾನಕ್ಕೆ ಡಿ ಶಿವಕುಮಾರ್ ಅವರು ಮಂಗಳವಾರ ರಾಜಿನಾಮೆ ನೀಡಿದ್ದು, ಆದಿತ್ಯ ಬಿರ್ಲಾ ಗ್ರೂಪ್ ನ ತಂತ್ರ ಮತ್ತು ವ್ಯವಹಾರ ಅಭಿವೃದ್ಧಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.
ಪೆಪ್ಸಿಕೋ ಈಜಿಪ್ತ್ ಮತ್ತು ಜೋರ್ಡನ್ ಹಿರಿಯ ಉಪಾಧ್ಯಕ್ಷ ಹಾಗೂ ಜನರಲ್ ಮ್ಯಾನೇಜರ್ ಆಗಿದ್ದ ಅಹ್ಮದ್ ಇಲ್ ಶೇಕ್ ಅವರನ್ನು ಶಿವಕುಮಾರ್ ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ ಎಂದು ಪೆಪ್ಸಿಕೋ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.
ಶಿವಕುಮಾರ್ ಅವರು ಇನ್ನು ಮೂರು ತಿಂಗಳಲ್ಲಿ ಆದಿತ್ಯ ಬಿರ್ಲಾ ಗ್ರೂಪ್ ಗೆ ಸೇರ್ಪಡೆಯಾಗುತ್ತಿದ್ದು, ಗ್ರೂಪ್ ಅಧ್ಯಕ್ಷ ಕುಮಾರ್ ಮಂಗಲಂ ಅವರಿಗೆ ರಿಪೋರ್ಟ್ ಮಾಡಿಕೊಳ್ಳಲಿದ್ದಾರೆ.
ಆದಿತ್ಯ ಬಿರ್ಲಾ ಗ್ರೂಪ್ ನ ತಂತ್ರ ಮತ್ತು ವ್ಯವಹಾರ ಅಭಿವೃದ್ಧಿಯ ಮುಖ್ಯಸ್ಥರಾಗಿ ಶಿವಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಆದಿತ್ಯ ಬಿರ್ಲಾ ಗ್ರೂಪ್ ನಿರ್ದೇಶಕ ಮತ್ತು ಸಿಇಒ ಸಂತೃಪ್ತ್ ಬಿ ಮಿಶ್ರಾ ಅವರು ಪಿಟಿಐಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


