ವಾಣಿಜ್ಯ

ಮುಂದಿನ 30 ವರ್ಷಗಳ ಕಾಲ ಸ್ಥಿರ ಆಡಳಿತ ನೀಡುವುದು ಎನ್ ಡಿಎ ಉದ್ದೇಶ: ಅಮಿತ್ ಷಾ

ಭಾರತದಲ್ಲಿ ಮುಂದಿನ 30 ವರ್ಷಗಳ ಕಾಲ ಸ್ಥಿರ ಆಡಳಿತ ನೀಡಿ ಹಂತ ಹಂತವಾಗಿ ಸುಧಾರಣೆ ಜಾರಿಗೆ ತರುವುದು ಎನ್ ಡಿಎ ಉದ್ದೇಶವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.

ಮುಂದಿನ 30 ವರ್ಷಗಳ ಕಾಲ ಸ್ಥಿರ ಆಡಳಿತ ನೀಡುವುದು ಎನ್ ಡಿಎ ಉದ್ದೇಶ: ಅಮಿತ್ ಷಾ
ಅಮಿತ್ ಷಾ
Published On :
ನವದೆಹಲಿ: ಭಾರತದಲ್ಲಿ ಮುಂದಿನ 30 ವರ್ಷಗಳ ಕಾಲ ಸ್ಥಿರ ಆಡಳಿತ ನೀಡಿ ಹಂತ ಹಂತವಾಗಿ ಸುಧಾರಣೆ ಜಾರಿಗೆ ತರುವುದು ಎನ್ ಡಿಎ ಉದ್ದೇಶವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ. 
ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ(ಎಫ್ಐಸಿಸಿಐ) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅಮಿತ್ ಷಾ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ದೇಶದ ಅಭಿವೃದ್ಧಿಗಾಗಿ ದೀರ್ಘಾವಧಿ ಸುಧಾರಣೆಗಳನ್ನು ಜಾರಿಗೆ ತಂದಿದೆ ಎಂದಿದ್ದಾರೆ. 
ಅಧಿಕಾರಕ್ಕೆ ಬಂದ ನಂತರ ನಾವು ದೀರ್ಘಾವಧಿ ಸುಧಾರಣೆಗಳ ಬಗ್ಗೆ ಗಮನ ಹರಿಸಿದ್ದೇವೆ, ಮುಂದಿನ 30 ವರ್ಷಗಳ ವರೆಗೆ ಸ್ಥಿರ ಆಡಳಿತ ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಅಮಿತ್ ಷಾ ಹೇಳಿದ್ದಾರೆ. 3 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ದೇಶದ ಜನತೆಯ ಚಿಂತನಾ ವಿಧಾನವನ್ನು ಬದಲಾವಣೆ ಮಾಡಿದ್ದು, ಬ್ರಾಂಡ್ ಇಂಡಿಯಾವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದು, ಸುಧಾರಣೆಗಳನ್ನು ಜಾರಿಗೆ ತರುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.