ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ.7ಕ್ಕಿಂತ ಕಡಿಮೆಯಾಗುವ ಸಾಧ್ಯತೆ: ಡಿಬಿಎಸ್ ವರದಿ
ಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಕಳೆದ ಮೂರು ವರ್ಷಗಳಲ್ಲಿಯೇ ಈ ವರ್ಷ ಅತ್ಯಂತ ಕಡಿಮೆ...

Published On :
ನವದೆಹಲಿ: ಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಕಳೆದ ಮೂರು ವರ್ಷಗಳಲ್ಲಿಯೇ ಈ ವರ್ಷ ಅತ್ಯಂತ ಕಡಿಮೆ ಶೇಕಡಾ 7ಕ್ಕೆ ಇಳಿಕೆಯಾಗುವ ಸಾಧ್ಯತೆಯಿದೆ ಎಂದು ಡಿಬಿಎಸ್ ವರದಿ ಮಾಡಿದೆ.
ಜಾಗತಿಕ ಹಣಕಾಸು ಸೇವಾ ಸಂಸ್ಥೆಯಾದ ಡಿಬಿಎಸ್ ಪ್ರಕಾರ, ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಜಾರಿಗೆ ಬಂದ ನೋಟು ಅನಾಣ್ಯೀಕರಣ ಮತ್ತು ಈ ವರ್ಷ ಜುಲೈ ತಿಂಗಳಲ್ಲಿ ಜಾರಿಗೆ ಬಂದ ಸರಕು ಮತ್ತು ಸೇವಾ ತೆರಿಗೆ ದೇಶದ ಆರ್ಥಿಕ ಚಟುವಟಿಕೆ ಮೇಲೆ ಅಲ್ಪಾವಧಿಯ ಪರಿಣಾಮವನ್ನುಂಟುಮಾಡಿದ್ದು ಮಂದಗತಿಯ ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ಕಾರಣವಾಗಿದೆ ಎಂದು ಹೇಳಿದೆ.
ಉತ್ಪಾದನೆ ಮತ್ತು ಹೂಡಿಕೆ ವಲಯದಲ್ಲಿ ಕ್ಷೀಣ ಬೆಳವಣಿಗೆಗೆಯಿಂದಾಗಿ ಕಳೆದ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಜಿಡಿಪಿ ಶೇಕಡಾ 5.9ರಷ್ಟಾಗಿತ್ತು ಎಂದು ಡಿಬಿಎಸ್ ಹೇಳಿದೆ.
2017-18ನೇ ಆರ್ಥಿಕ ವರ್ಷದಲ್ಲಿ ಜೂನ್ ಮೊದಲಾರ್ಧದಲ್ಲಿ ಆರ್ಥಿಕತೆ ಕುಂಠಿತವಾಗಿ ಪ್ರಗತಿ ಕಂಡಿತ್ತು. ಜುಲೈಯಿಂದ ಸೆಪ್ಟೆಂಬರ್ ತಿಂಗಳಲ್ಲಿ ಮಾತ್ರ ಸ್ವಲ್ಪ ಮಟ್ಟಿಗೆ ಬೆಳವಣಿಗೆಯಾಗಿತ್ತು. ಈ ವರ್ಷ ಜಿಡಿಪಿ ಶೇಕಡಾ 6.8ರಷ್ಟು ಸರಾಸರಿ ಬೆಳವಣಿಗೆಯಾಗುತ್ತದೆ ಎಂದು ನಿರೀಕ್ಷಿಸಲಾಗಿದೆ ಎಂದು ಡಿಬಿಎಸ್ ಸಂಶೋಧನೆಯ ವರದಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


