ಆರ್ಥಿಕ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರದಿಂದ 50 ಸಾವಿರ ಕೋಟಿ ರು.ಪ್ಯಾಕೇಜ್
ಇತ್ತೀಚಿನ ದಿನಗಳಲ್ಲಿ ದೇಶದ ಆರ್ಥಿಕ ಬೆಳವಣಿಗೆ(ಜಿಡಿಪಿ) ದರ ಕುಸಿತದ ಹಾದಿಯಲ್ಲಿ ಸಾಗಿದ್ದು, ಇದನ್ನು ತಡೆಯುವುದಕ್ಕಾಗಿ....

Published On :
ನವದೆಹಲಿ: ಇತ್ತೀಚಿನ ದಿನಗಳಲ್ಲಿ ದೇಶದ ಆರ್ಥಿಕ ಬೆಳವಣಿಗೆ(ಜಿಡಿಪಿ) ದರ ಕುಸಿತದ ಹಾದಿಯಲ್ಲಿ ಸಾಗಿದ್ದು, ಇದನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ 50 ಸಾವಿರ ಕೋಟಿ ರುಪಾಯಿ ಉತ್ತೇಜನಾ ಪ್ಯಾಕೇಜ್ ನೀಡಲು ಮುಂದಾಗಿದೆ ಎಂದು ಸರ್ಕಾರದ ಇಬ್ಬರು ಹಿರಿಯ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ದೇಶದ ಆರ್ಥಿಕ ಬೆಳವಣಿಗೆ(ಜಿಡಿಪಿ) ದರ 5.7ಕ್ಕೆ ಕುಸಿಯುವ ಮೂಲಕ ಮೂರು ವರ್ಷ ಹಿಂದಕ್ಕೆ ಹೋಗಿದ್ದು, ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಆರ್ಥಿಕ ವ್ಯವಸ್ಥೆಯನ್ನು ಮತ್ತೆ ಸರಿ ದಾರಿಗೆ ತರಲು ಕೇಂದ್ರ ಸರ್ಕಾರ ಉತ್ತೇಜನಾ ಪ್ಯಾಕೇಜ್ ಘೋಷಿಸಲು ಸಿದ್ಧತೆ ನಡೆಸಿದೆ ಎಂದು ಹೇಳಿದ್ದರು.
ಯಾವ, ಯಾವ ವಲಯಗಳಿಗೆ ಪ್ಯಾಕೇಜ್ ದೊರೆಯಲಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅರುಣ್ ಜೇಟ್ಲಿ ನಿರಾಕರಿಸಿದ್ದಾರೆ. ಮೂಲಗಳ ಪ್ರಕಾರ, ಜವಳಿ, ತಯಾರಿಕಾ ವಲಯ, ಚರ್ಮೋದ್ಯಮ, ಹರಳು ಮತ್ತು ಆಭರಣ ವಲಯಗಳಿಗೆ ಆರ್ಥಿಕ ಉತ್ತೇಜನ ದೊರೆಯಲಿದೆ ಎನ್ನಲಾಗಿದೆ. ಇನ್ನೂ ಕೆಲವು ಉದ್ಯಮ ಕ್ಷೇತ್ರಗಳಿಗೆ ಫೆಬ್ರುವರಿಯಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ ಪ್ಯಾಕೇಜ್ ಘೋಷಿಸಬಹುದು. ಆದರೆ, ರಫ್ತು ವಲಯಕ್ಕೆ ಮಾತ್ರ ಸರ್ಕಾರ ಇನ್ನೂ ಒಂದೆರೆಡು ವಾರಗಳಲ್ಲಿ ಉತ್ತೇಜನಾ ಪ್ಯಾಕೇಜ್ ಘೋಷಿಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


