2025 ರ ವೇಳೆಗೆ ಭಾರತವಾಗಲಿದೆ 5 ಟ್ರಿಲಿಯನ್ ಡಾಲರ್ ಎಕಾನಮಿ!
ಜಾಗತಿಕ ಆರ್ಥಿಕತೆ ಕುಸಿಯುತ್ತಿದ್ದರೂ ಭಾರತದ ಆರ್ಥಿಕತೆ ಮಾತ್ರ ಆಶಾದಾಯಕವಾಗಿದ್ದು, ಪ್ರಸ್ತುತ 2.6 ಟ್ರಿಲಿಯನ್ ಆರ್ಥಿಕತೆಯಾಗಿರುವ ಭಾರತ 2025 ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ

Published On :
ನವದೆಹಲಿ: ಜಾಗತಿಕ ಆರ್ಥಿಕತೆ ಕುಸಿಯುತ್ತಿದ್ದರೂ ಭಾರತದ ಆರ್ಥಿಕತೆ ಮಾತ್ರ ಆಶಾದಾಯಕವಾಗಿದ್ದು, ಪ್ರಸ್ತುತ 2.6 ಟ್ರಿಲಿಯನ್ ಆರ್ಥಿಕತೆಯಾಗಿರುವ ಭಾರತ 2025 ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
2007-14 ರ ವರೆಗೆ ಭಾರತದ ಜಿಡಿಪಿ 1 ಟ್ರಿಲಿಯನ್ ಡಾಲರ್ ನಿಂದ 2 ಟ್ರಿಲಿಯನ್ ಡಾಲರ್ ವರೆಗೂ ಬೆಳೆದಿದ್ದು, ಈ ಹಿನ್ನೆಲೆಯಲ್ಲಿ ವಿಶ್ಲೇಷಿಸುವುದಾದರೆ 2025 ರ ವೇಳೆಗೆ ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವುದು ಕಷ್ಟ ಸಾಧ್ಯವೇನು ಅಲ್ಲ.
ಕಳೆದ ಕೆಲವು ವರ್ಷಗಳಿಂದ ಭಾರತ ಸರ್ಕಾರ ಕೈಗೊಂಡಿರುವ ಕೆಲವು ಸುಧಾರಣೆಗಳು ಈಗ ಫಲ ನೀಡಲು ಪ್ರಾರಂಭಿಸಿದ್ದು, ಭಾರತ ವಿಶ್ವದಲ್ಲೇ ವೇಗವಾಗಿ ಬೆಳವಣಿಗೆಯಾಗುತ್ತಿರುವ ಆರ್ಥಿಕತೆಯಾಗಿದೆ ಎಂದು ವಿಶ್ವಬ್ಯಾಂಕ್ ನಲ್ಲಿರುವ ಭಾರತದ ಅಧಿಕಾರಿಯೊಬ್ಬರು ಹೇಳಿದ್ದಾರೆ.
2018 ರಲ್ಲಿ ಭಾರತದ ಜಿಡಿಪಿ ಶೇ.7.4 ರಷ್ಟನ್ನೂ ದಾಟಿ ಬೆಳೆವಣಿಗೆಯಾಗುವ ನಿರೀಕ್ಷೆ ಇದ್ದು, ದಕ್ಷಿಣ ಏಷ್ಯಾ ರಾಷ್ಟ್ರಗಳಾದ ಭೂತಾನ್, ನೇಪಾಳ, ಬಾಂಗ್ಲಾದೇಶ, ಶ್ರೀಲಂಕಾ ರಾಷ್ಟ್ರಗಳ ಪೈಕಿ ಭಾರತವೇ ಬೆಳವಣಿಗೆಗೆ ಆಶಾಕಿರಣವಾದ ಪ್ರದೇಶವಾಗಿದೆ. ಭಾರತ 2025 ರ ವೇಳೆಗೆ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


