ವಾಣಿಜ್ಯ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಪ್ರಸ್ತವಾನೆ ಇಲ್ಲ: ಡಿಇಎ ಕಾರ್ಯದರ್ಶಿ

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಪ್ರಸ್ತಾವನೆ ಇಲ್ಲ, ಪೆಟ್ರೋಲ್, ಡೀಸೆಲ್ ದರ ಅಂತಹ ಮಟ್ಟ ತಲುಪಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಪ್ರಸ್ತವಾನೆ ಇಲ್ಲ: ಡಿಇಎ ಕಾರ್ಯದರ್ಶಿ
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವ ಪ್ರಸ್ತವಾನೆ ಇಲ್ಲ: ಡಿಇಎ ಕಾರ್ಯದರ್ಶಿ
Published On :
ನವದೆಹಲಿ: ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ  ಪ್ರಸ್ತಾವನೆ ಇಲ್ಲ, ಪೆಟ್ರೋಲ್, ಡೀಸೆಲ್ ದರ ಅಂತಹ ಮಟ್ಟ ತಲುಪಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ. 
ಒಂದು ವಾರದಿಂದ ತೈಲ ಕಂಪನಿಗಳು ತೈಅಲ್ ದರವನ್ನು ಪರಿಷ್ಕರಣೆ ಮಾಡಿಲ್ಲ.  ಆದರೆ ಪೆಟ್ರೋಲ್ ದರ ಈಗಾಗಲೇ 55 ತಿಂಗಳಲ್ಲೇ ಅತಿ ಹೆಚ್ಚು ಅಂದರೆ 74.63 ರೂಗಳಿಗೆ ಏರಿಕೆಯಾಗಿದ್ದು, ಡೀಸೆಲ್ ದರ ಪ್ರತಿ ಲೀಟರ್ ಗೆ ದಾಖಲೆಯ 65.93 ರೂಪಾಯಿಗಳಿಗೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪಿಟಿಐ ಗೆ ನೀಡಿರುವ ಸಂದರ್ಶನದಲ್ಲಿ ಗರ್ಗ್ ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ರದ್ದುಗೊಳಿಸುವ ಪ್ರಸ್ತಾವನೆ ಇಲ್ಲ ಎಂದು ಸ್ಪಾಷ್ಟಪಡಿಸಿದ್ದಾರೆ. 
ಸಬ್ಸಿಡಿ ನೀಡಲಾಗುತ್ತಿರುವ ಎಲ್ ಪಿಜಿ ದರಗಳು ತೀವ್ರವಾಗಿ ಏರಿಕೆಯಾದರೆ ತೈಲ ಬೆಲೆಗಳು ಸರ್ಕಾರದ ಆರ್ಥಿಕ ಲೆಕ್ಕಾಚಾರದ ಮೇಲೆ ಪರಿಣಾಮ ಬೀರಬಹುದು,  ಇದರ ಹೊರತಾಗಿ ಪರೋಕ್ಷ ಸಬ್ಸಿಡಿ ನೀಡಬೇಕಾದರೆ ಕಚ್ಚಾ ತೈಲ ಬೆಲೆ ನಿರ್ದಿಷ್ಟ ಮಟ್ಟವನ್ನು ತಲುಪಿರಬೇಕು, ಹಾಗಾದಲ್ಲಿ ಮಾತ್ರ ಅಬಕಾರಿ ಸುಂಕದ ಬಗ್ಗೆ ಯೋಚನೆ ಮಾಡಲು ಸಾಧ್ಯ ಎಂದು ಸುಭಾಷ್ ಚಂದ್ರ ಗರ್ಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.