ವಾಣಿಜ್ಯ

ಮತ್ತೆ ದಾಖಲೆ ಬರೆದ ಭಾರತೀಯ ಷೇರುಮಾರುಕಟ್ಟೆ, ನಿಫ್ಟಿ, ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ

ಕಳೆದೆರಡು ವಾರಗಳಿಂದ ಏರುಗತಿಯಲ್ಲಿ ಸಾಗಿರುವ ಭಾರತೀಯ ಷೇರುಮಾರುಕಟ್ಟೆ ಮತ್ತೆ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸೆನ್ಸೆಕ್ಸ್ 37, 778 ಅಂಕಗಳಿಗೆ ಏರಿಕೆಯಾಗುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ.

ಮತ್ತೆ ದಾಖಲೆ ಬರೆದ ಭಾರತೀಯ ಷೇರುಮಾರುಕಟ್ಟೆ, ನಿಫ್ಟಿ, ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ
ಸಂಗ್ರಹ ಚಿತ್ರ
Published On :
ಮುಂಬೈ: ಕಳೆದರೆಡು ವಾರಗಳಿಂದ ಏರುಗತಿಯಲ್ಲಿ ಸಾಗಿರುವ ಭಾರತೀಯ ಷೇರುಮಾರುಕಟ್ಟೆ ಮತ್ತೆ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸೆನ್ಸೆಕ್ಸ್ 37, 778 ಅಂಕಗಳಿಗೆ ಏರಿಕೆಯಾಗುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಾಣ ಮಾಡಿದೆ.
ಷೇರುಮಾರುಕಟ್ಟೆಯಲ್ಲಿ ಗೂಳಿ ಆರ್ಭಟ ಮತ್ತೆ ಮುಂದುವರೆದಿದ್ದು, ಸೆನ್ಸೆಕ್ಸ್ ದಾಖಲೆಯ 222.03ಅಂಕಗಳ ಏರಿಕೆಯೊಂದಿಗೆ  37,778 ಅಂಕಗಳೊಂದಿಗೆ ವಾರದ ವಹಿವಾಟು ಆರಂಭಿಸಿದೆ. ಭಾರತೀಯ ಷೇರುಮಾರುಕಟ್ಟೆ ಇತಿಹಾಸದಲ್ಲೇ ಇದು ಸಾರ್ವಕಾಲಿಕ ಗರಿಷ್ಠ ಅಂಕಗಳ ವಹಿವಾಟು ಆರಂಭವಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಅಂತೆಯೇ ನಿಫ್ಟಿ ಕೂಡ 38 ಅಂಕಗಳ ಏರಿಕೆಯೊಂದಿಗೆ 11, 400 ಅಂಕಗಳ ಗಡಿ ದಾಟಿದೆ.  ವಾರದ ವಹಿವಾಟು ಆರಂಭದಲ್ಲೇ ಭಾರತೀಯ ಷೇರುಮಾರುಕಟ್ಟೆ ತನ್ನ ಅಂಕಗಳನ್ನು ಏರಿಕೆ ಮಾಡಿಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.